ಕಟಪಾಡಿ, ಫೆ.17: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯಿಂದ 6 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾದ ಸುಗುಣಾ ಪೂಜಾರ್ತಿ, ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಪವಿತ್ರಾ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ ಕಟಪಾಡಿ, ಕೋಟೆ, ಕುರ್ಕಾಲು, ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಜಿಲ್ಲಾ, ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.