ಇಂದ್ರಾಳಿ, ಫೆ.17: ಉಡುಪಿ ಜಿಲ್ಲೆಯಿಂದ ಮಹಾಕುಂಭಮೇಳಕ್ಕೆ ಪ್ರಯಾಗ್ ರಾಜ್ ಗೆ ತೆರಳಿರುವವರಿಗೆ ಆಯೋಜಿಸಲಾದ ಉಡುಪಿ – ಪ್ರಯಾಗ್ ರಾಜ್ ವಿಶೇಷ ರೈಲಿಗೆ ಸೋಮವಾರ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಚಾಲನೆ ನೀಡಿ ಶುಭ ಹಾರೈಸಿದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.