Tuesday, July 28, 2026
Tuesday, July 28, 2026

ಭರತನಾಟ್ಯ: ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ. ಭವಾನಿ ಶಂಕರ್ ವಿದ್ಯಾರ್ಥಿಗಳ ಅಮೋಘ ಸಾಧನೆ

ಭರತನಾಟ್ಯ: ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ. ಭವಾನಿ ಶಂಕರ್ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಉಡುಪಿ, ಫೆ.18: ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ನಡೆಸಿದ ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆಯಲ್ಲಿ ಯಶಸ್ವಿ ಶೇ.82.4% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸರ್ವೇಶ್ ಭಟ್ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.83.8% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರಿಬ್ಬರು ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ. ಭವಾನಿ ಶಂಕರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಯಶಸ್ವಿ ಡಾ.ಜಿ. ಶಂಕರ್ ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇಲ್ಲಿ ದ್ವಿತೀಯ ಎಂಕಾಮ್ ವಾಸಂಗ ಮಾಡುತ್ತಿದ್ದಾರೆ. ಇವರು ಪುತ್ತೂರು ಸುಬ್ರಹ್ಮಣ್ಯ ನಗರದ ವಿಜಯ್ ಸನಿಲ್ ಹಾಗೂ ಸುಮಾ ಸನಿಲ್ ದಂಪತಿಗಳ ಪುತ್ರಿ. ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿಯಾಗಿರುವ ಸರ್ವೇಶ್ ಭಟ್ ಇವರು ಪೆರಂಪಳ್ಳಿಯ ವೇದಮೂರ್ತಿ ಪ್ರಾಣೇಶ್ ಭಟ್ ಹಾಗೂ ಸೌಮ್ಯ ಭಟ್ ಇವರ ಪುತ್ರ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!