ಉಡುಪಿ, ಫೆ.20: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಇದರಿಂದ ಪ್ರತಿಷ್ಠಿತ ವಿಶ್ವಪ್ರಭಾ ಪುರಸ್ಕಾರ -2025 ಫೆಬ್ರವರಿ 23, ಭಾನುವಾರ ಸಂಜೆ 5:00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಲಾಗುವುದು.
ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಂಗಳೂರಿನ ನಟ ನವೀನ್ ಡಿ. ಪಡೀಲ್ ಅವರಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ನಗದು ಒಂದು ಲಕ್ಷ ಗೌರವಧನದೊಂದಿಗೆ ಪುರಸ್ಕರಿಸಲಾಗುವುದು.
ಸಭಾ ಕಾರ್ಯಕ್ರಮದ ನಂತರ ಮಂಚಿಕೇರಿ ರಂಗ ಸಮೂಹ ತಂಡದಿಂದ ಮರಾಠಿ ಮೂಲ ಜಯವಂತ ದಳ್ವಿ ಅವರ, ಎಚ್ ಕೆ ಕಕೇ೯ರ ಅವರು ಕನ್ನಡಕ್ಕೆ ಅನುವಾದಿಸಿದ ಕಾಲಚಕ್ರ ನಾಟಕ ಪ್ರದರ್ಶನಗೊಳ್ಳಲಿದೆ. ಇದರ ನಿರ್ದೇಶನವನ್ನು ಹಿರಿಯ ರಂಗಕರ್ಮಿ ಹುಲುಗಪ್ಪ ಕಟ್ಟಿಮನಿ ನಿರ್ದೇಶಿಸಿರುತ್ತಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.