Saturday, February 22, 2025
Saturday, February 22, 2025

ಕಲಿಕಾ ಹಬ್ಬ ವಿದ್ಯಾರ್ಥಿಗಳ ಸೃಜನಶೀಲ ಚಟುವಟಿಕೆಗೆ ಸಹಕಾರಿ

ಕಲಿಕಾ ಹಬ್ಬ ವಿದ್ಯಾರ್ಥಿಗಳ ಸೃಜನಶೀಲ ಚಟುವಟಿಕೆಗೆ ಸಹಕಾರಿ

Date:

ಹಂಗಾರಕಟ್ಟೆ, ಫೆ.21: ಸೃಜನಶೀಲ ಚಟುವಟಿಕೆಗೆ ಕಲಿಕಾ ಹಬ್ಬ ಸಹಕಾರಿ ಎಂದು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜ್ಮುಂ ಅಭಿಪ್ರಾಯಪಟ್ಟರು ಶುಕ್ರವಾರ ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ(ದೂಳಂಗಡಿ) ಹಂಗಾರಕಟ್ಟೆ ಇವರುಗಳ ಸಹಭಾಗಿತ್ವದಡಿ ೨೦೨೪-೨೫ನೇ ಸಾಲಿನ ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ರೇಖಾ ಉಡುಪ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ವಲಯ ಶಿಕ್ಷಣ ಇಲಾಖೆಯ ಸಂಯೋಜಕ ಪ್ರಕಾಶ್ ಬಿ.ಬಿ ಉಪಸ್ಥಿತರಿದ್ದರು. ಹಂಗಾರಕಟ್ಟೆ ಸಿಆರ್‌ಪಿ ಮಾಲಿನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಪ್ರಸಿಲ್ಲಾ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಕಾರ್ತಿಕ್ ಮತ್ತು ಸಾನ್ವಿ ನಿರೂಪಿಸಿದರು.ಶಿಕ್ಷಕಿ ವೀಣಾ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!