ಉಡುಪಿ, ಫೆ.21: ಹೆಜಮಾಡಿಯಲ್ಲಿ ರೈಲು ಹಳಿಯಲ್ಲಿರುವ ಕಬ್ಬಿಣದ ವಸ್ತುಗಳ ಕಳ್ಳತನಕ್ಕೆ ಸಂಬಂಧಿಸಿದಂತೆಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಿಬ್ಬಂದಿಗಳಿಗೆ ಧೈರ್ಯ ತುಂಬಿದ್ದೇನೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಮ್ಮ ಸಿಬ್ಬಂದಿ ಅತಿದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ಅನೇಕ ಪ್ರಯಾಣಿಕರ ಜೀವ ಉಳಿಸಿದ್ದಾರೆ. ಅವರನ್ನು ನಾನು ಅಭಿನಂದಿಸುತ್ತೇನೆ. ಇದರಲ್ಲಿ ಜಾತಿ, ಧರ್ಮದ ವಿಚಾರ ಬರಲ್ಲ. ಜನರ ಜೀವ ಮುಖ್ಯ. ಇದು ಕೇವಲ ಮಕ್ಕಳಾಟಿಗೆ ಎಂದು ಅನ್ನಿಸುವುದಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದು ಕೂಡಲೇ ಈ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿ ಇದರ ಹಿಂದೆ ಇರುವ ಹುನ್ನಾರವನ್ನು ಪತ್ತೆ ಹಚ್ಚಬೇಕೆಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೂಡಲೇ ರೈಲು ಸಿಬ್ಬಂದಿ ಮೇಲಿರುವ ಪ್ರಕರಣ ವಾಪಾಸು ಪಡೆಯಲು ಆಗ್ರಹಿಸಿದ್ದೇನೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಹೆಜಮಾಡಿ ರೈಲು ಹಳಿ ಪ್ರಕರಣ- ಕೂಲಂಕಷ ತನಿಖೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಹೆಜಮಾಡಿ ರೈಲು ಹಳಿ ಪ್ರಕರಣ- ಕೂಲಂಕಷ ತನಿಖೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
Date: