Sunday, January 19, 2025
Sunday, January 19, 2025

ಉಡುಪಿ- ರಿವಾಲ್ವರ್ ತೋರಿಸಿ ನಗದು, ಆಭರಣಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳಿಗೆ ಶಿಕ್ಷೆ

ಉಡುಪಿ- ರಿವಾಲ್ವರ್ ತೋರಿಸಿ ನಗದು, ಆಭರಣಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳಿಗೆ ಶಿಕ್ಷೆ

Date:

ಉಡುಪಿ: ಮನೆ ಹಾಗೂ ಅಂಗಡಿಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2008 ಡಿಸೆಂಬರ್ 8 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಉಡುಪಿಯ ಮಾರಾಳಿ ಗ್ರಾಮದ ಉಮಾನಾಥ ಶೆಟ್ಟಿ, ಬೆಂಗಳೂರಿನ ಮಾರತ್ ಹಳ್ಳಿಯ ಶ್ರೀಧರ್ ಆಲಿಯಾಸ್ ಪ್ರಕಾಶ್, ಹಾಸನದ ಸುನೀಲ್ ಕುಮಾರ್ ಹಾಗೂ ಮಂಗಳೂರು ಕಂದಾವರ ಗ್ರಾಮದ ಸಂತೋಷ್ ಅಲಿಯಾಸ್ ಅಲ್ವಿನ್ ಪಿಂಟೋ ಎಂಬ ನಾಲ್ಕು ಜನ ಆರೋಪಿಗಳು, ಉಡುಪಿ ತಾಲೂಕು ನಾಲ್ಕೂರು ಗ್ರಾಮದ ಮುದ್ದೂರಿನ ಬಾಲಕೃಷ್ಣ ವೈದ್ಯ ಎಂಬ ವ್ಯಕ್ತಿಯ ಮನೆ ಮತ್ತು ಅಂಗಡಿಗೆ ಪ್ರವೇಶಿಸಿ, ರಿವಾಲ್ವರ್ ತೋರಿಸಿ, ಬೆದರಿಕೆ ಹಾಕಿ, ಮನೆಯಲ್ಲಿದ್ದ ಮೂವರನ್ನು ಕಟ್ಟಿಹಾಕಿ, 15000 ರೂ. ನಗದು, 71 ಪವನ್ ಚಿನ್ನ ಮತ್ತು 5 ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡಿರುವ ಹಿನ್ನೆಲೆ, ಹೆಬ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ರವರು ಆರೋಪಿಗಳಾದ ಉಮಾನಾಥ ಶೆಟ್ಟಿ, ಸುನೀಲ್ ಕುಮಾರ್ ಹಾಗೂ ಸಂತೋಷ್ ಅಲಿಯಾಸ್ ಅಲ್ವಿನ್ ಪಿಂಟೋ ರವರಿಗೆ 3 ವರ್ಷ 6 ತಿಂಗಳು ಕಾರಾಗೃಹ ವಾಸ ಶಿಕ್ಷೆ ಹಾಗೂ 10500 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.

ಸರಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಬದರಿನಾಥ ನಾಯ್ರಿ ಮತ್ತು ಜಯಂತಿ ಕೆ ವಾದ ಮಂಡಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!