Friday, September 25, 2026
Friday, September 25, 2026

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

Date:

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು ಶತಮಾನೋತ್ಸವ ಆಚರಿಸಿಕೊಳ್ಳುತ್ತಿದ್ದು ಈ ಹಿನ್ನಲೆಯಲ್ಲಿ ಇದರ ಶತಪರ್ವ ಮನವಿ ಪತ್ರವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ಬಿಡುಗಡೆಗೊಳಿಸಿದರು. ಡಾ.ಕೋಟ ಶಿವರಾಮ ಕಾರಂತರ ತಂದೆ ಶೇಷ ಕಾರಂತರು 1924 ರಲ್ಲಿ ಪ್ರಾರಂಭಿಸಿದ ಈ ಶಾಂಭವಿ ಶಾಲೆ ನಾನು ಕಲಿತ ಶಾಲೆ ಎಂಬ ಹೆಮ್ಮ ನನಗಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಕಾರಂತ ಮನೆತನದ ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ಅದೇ ರೀತಿ ಒಂದಿಷ್ಟು ಮುಂದಾಲೋಚನೆ ಇರಿಸಿಕೊಂಡು ಶಾಲೆಯ ಸರ್ವತೋಮುಖ ಶ್ರೇಯಸ್ಸು ಕಾಣವಂತಾಗಲು ಶಾಲಾ ಆಡಳಿತ ಮಂಡಳಿ ಹಾಗೂ ಹಿಂದಿನ ವಿದ್ಯಾರ್ಥಿ ಸಂಘ ಶ್ರಮಿಸಲಿ ಎಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ರಾಜಾರಾಂ ಐತಾಳ್, ಸಂಚಾಲಕ ಸಚಿನ್ ಕಾರಂತ, ಮುಖ್ಯ ಶಿಕ್ಷಕ ದಿವಾಕರ್ ಐತಾಳ್, ಶಾಲಾ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸದಾನಂದ ಪೂಜಾರಿ, ಜತೆ ಕಾರ್ಯದರ್ಶಿ ರವೀಂದ್ರ ಕೋಟ, ಸದಸ್ಯರಾದ ರಾಘವೇಂದ್ರ ಪೂಜಾರಿ, ಪ್ರದೀಪ್, ಶಾಲಾಭಿವೃದ್ಧಿ ಸಮಿತಿಯ ಪ್ರಮುಖರಾದ ಶ್ರೀಕಾಂತ್ ಶೆಣೈ, ಸತೀಶ್ ಜಿ ಹೆಗ್ಡೆ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!