ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃಧ್ದಿಪಡಿಸಿ ಅಂತರ್ಜಲ ಮಟ್ಟವನ್ನು ಸುಧಾರಿಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಕೆರೆಗಳ ಸುತ್ತ ವಾಕಿಂಗ್ ಟ್ರ್ಯಾಕ್ ಹಾಗೂ ಬೆಂಚುಗಳ ಅಳವಡಿಕೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದರು.
ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಕಲ್ಮಾಡಿ, ಸ್ಥಳೀಯ ಪ್ರಮುಖರಾದ ನಾಗೇಶ್ ಹೆಗ್ಡೆ, ಸರ್ವಜ್ಞ ರಾವ್, ಮಂಜುನಾಥ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.