Friday, November 13, 2026
Friday, November 13, 2026

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Date:

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃಧ್ದಿಪಡಿಸಿ ಅಂತರ್ಜಲ ಮಟ್ಟವನ್ನು ಸುಧಾರಿಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಕೆರೆಗಳ ಸುತ್ತ ವಾಕಿಂಗ್ ಟ್ರ್ಯಾಕ್ ಹಾಗೂ ಬೆಂಚುಗಳ ಅಳವಡಿಕೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದರು.

ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಕಲ್ಮಾಡಿ, ಸ್ಥಳೀಯ ಪ್ರಮುಖರಾದ ನಾಗೇಶ್ ಹೆಗ್ಡೆ, ಸರ್ವಜ್ಞ ರಾವ್, ಮಂಜುನಾಥ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾರಂಗದ 109ನೇ ಮನೆ ಹಸ್ತಾಂತರ

ಉಡುಪಿ, ನ.12: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾನ್ವಿ...

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಮಹಾಸಭೆ

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಆವರಣದಲ್ಲಿ ಜರುಗಿತು....

ಕುರ್ಕಾಲು: 40 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.12: ಕಾಪು ವಿಧಾನಸಭಾ ಕ್ಷೇತ್ರದ ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿನ್ನ ಬೆಳ್ಳಿ ಬೆಲೆಗಳಲ್ಲಿ ಇಳಿಕೆ

ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆಯು ಶೇಕಡಾ...
error: Content is protected !!