Tuesday, February 25, 2025
Tuesday, February 25, 2025

ರೆಡ್ ಕ್ರಾಸ್ ಶಿಬಿರ

ರೆಡ್ ಕ್ರಾಸ್ ಶಿಬಿರ

Date:

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್ ನ ವಾರ್ಷಿಕ ಶಿಬಿರದ ಉದ್ಘಾಟನೆ ಗೋವರ್ಧನ ಗೋಶಾಲೆ ನೀಲಾವರದಲ್ಲಿ ನಡೆಯಿತು.​

ಮಾನವೀಯ ಸೇವೆಯ ಮೂಲಕ ಜನರ ಸೇವೆಯನ್ನು ಮಾಡುವುದು ರೆಡ್ ಕ್ರಾಸ್ ನ ಮುಖ್ಯ ಉದ್ದೇಶವಾಗಿದೆ.​ ಮಾನವೀಯತೆಯೇ ಶಾಂತಿ, ಸ್ವಾತಂತ್ರ್ಯ, ಐಕ್ಯತೆ​, ​ರೆಡ್ ಕ್ರಾಸ್ ಪ್ರತಿಪಾದಿಸುವ ಮೂಲತತ್ವಗಳು.

ಈ ತತ್ವಗಳನ್ನು ಅರ್ಥಮಾಡಿಕೊಂಡು ಸ್ವಯಂ ಸೇವಕರು ರೆಡ್ ಕ್ರಾಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಗತ್ಯ ಎಂದು ಡಾ।ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ನಿಕೇತನ ಇವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್.ನಾಯ್ಕ ಅಧ್ಯಕ್ಷತೆ ವಹಿಸಿ ಸಹಬಾಳ್ವೆ, ಮಾನವೀಯತೆ ಹಾಗೂ ಸೇವೆಯ ಮಹತ್ವದ ಕುರಿತು ಮಾತನಾಡಿದರು. ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಬಿ.ಪಿ ವರದರಾಯ್ ಪೈ. ಮಹಾತ್ಮ ಗಾಂಧಿ ಸ್ಮಾರಕ ಕಾಲೇಜಿನ ಪ್ರೊ.ಲಕ್ಷ್ಮೀನಾರಾಯಣ ಕಾರಂತ, ಕೆ.ಬೇಬಿ, ಗೀತಾ ಬಾಳಿಗ, ಡಾ. ಮಲ್ಲಿಕಾ ಎ ಶೆಟ್ಟಿ​, ರೆಡ್ ಕ್ರಾಸ್ ಯೋಜನಾಧಿಕಾರಿ ದೀಪಿಕಾ ಉಪಸ್ಥಿತರಿದ್ದರು. ಪ್ರಜ್ಞಾ ಸ್ವಾಗತಿಸಿ, ಪುಣ್ಯ ವಂದಿಸಿದರು. ದಿಶಾ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!