ಮಣಿಪಾಲ: ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಪ್ರತಿ ಗುರುವಾರ ಪೂರ್ವಾಹ್ನ 9.00ರಿಂದ ಅಪರಾಹ್ನ 5.00 ಗಂಟೆಯವರೆಗೆ ಆರ್ಥಿಕವಾಗಿ ಹಿಂದುಳಿದ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಕ್ಕರೆ ಕಾಯಿಲೆ, ಬೊಜ್ಜುತನ ಮುಂತಾದ ಜೀವನಶೈಲಿ ಕಾಯಿಲೆಗಳು, ಶ್ವಾಸಕೋಶದ ತೊಂದರೆಗಳು, ಚರ್ಮ ರೋಗಗಳು, ಜೀರ್ಣಾಂಗದ ಸಮಸ್ಯೆಗಳು, ಸಂಧಿವಾತ, ನರದೌರ್ಬಲ್ಯ, ಮುಟ್ಟಿನ ಸಮಸ್ಯೆಗಳು, ರಕ್ತಹೀನತೆ, ಕೂದಲುದುರುವಿಕೆ, ಗುದನಾಳದ ಸಮಸ್ಯೆಗಳು,ಇತರ ಕಾಯಿಲೆಗಳಿಗೆ ಹೊರರೋಗಿ ವಿಭಾಗದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ- ಉಚಿತ ಆರೋಗ್ಯ ತಪಾಸಣಾ ಶಿಬಿರ

ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ- ಉಚಿತ ಆರೋಗ್ಯ ತಪಾಸಣಾ ಶಿಬಿರ
Date: