Wednesday, February 26, 2025
Wednesday, February 26, 2025

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

Date:

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಹಾಗೂ ಸಿಬ್ಬಂದಿಗಳ ಕ್ರೀಡಾಕೂಟದಲ್ಲಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಹಿಳೆಯರ ವಿಭಾಗವು ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ, ಮಹಿಳೆಯರ ಹಗ್ಗ ಜಗ್ಗಾಟದಲ್ಲಿ ದ್ವಿತೀಯ ಸ್ಥಾನ, ಪುರುಷರ ಹಗ್ಗ ಜಗ್ಗಾಟದಲ್ಲಿ ತೃತೀಯ ಸ್ಥಾನ ಹಾಗೂ ಪಥಸಂಚಲನದಲ್ಲಿ 5 ನೇ ಸ್ಥಾನ ಸೇರಿದಂತೆ ಒಟ್ಟು 4 ಬಹುಮಾನವನ್ನು ಗೆದ್ದು, ಪಾರಿತೋಷಕ, ಪ್ರಮಾಣಪತ್ರ ಹಾಗೂ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು. ಪಥಸಂಚಲನದಲ್ಲಿ ಬ್ರಹ್ಮಾವರ ತಾಲೂಕು ಮೊದಲ ಸ್ಥಾನವನ್ನು ಪಡೆದುಕೊಂಡಿತು. ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಮುಖ್ಯಾಧಿಕಾರಿ, ಪಂಚಾಯತಿಯ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...
error: Content is protected !!