ಮಣಿಪಾಲ, ಫೆ.26: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಕಾರ್ಯಾಗಾರ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಡಾ. ದಯಾನಂದ ಪೈ, ಉಡುಪಿ ಜಿಲ್ಲಾ ಗಣಕ ವಿಜ್ಞಾನ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜ್ಞಾನೇಶ್ ಕೋಟ್ಯಾನ್, ಕಾರ್ಯದರ್ಶಿ ಶಕುಂತಲಾ ರಾಜೇಶ್ ಪಾಲನ್, ಖಜಾಂಜಿ ಬಿನು ಜಯಚಂದ್ರನ್ ಉಪಸ್ಥಿತರಿದ್ದರು.
ಎಸ್.ಎಮ್.ಎಸ್. ಪದವಿಪೂರ್ವ ಕಾಲೇಜು ಬ್ರಹ್ಮಾವರದ ಗಣಕಶಾಸ್ತ್ರ ಉಪನ್ಯಾಸಕರಾದ ಸಂತೋಷ್ ನೀಲಾವರ ಹಾಗೂ ಎಮ್.ಐ.ಟಿ. ಮಣಿಪಾಲದ ಐ.ಸಿ.ಟಿ. ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ನಿಶಾ ಪಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ನಿರೂಪಿಸಿ ವಂದಿಸಿದರು.