Wednesday, July 29, 2026
Wednesday, July 29, 2026

ಕುಡಿಯುವ ನೀರಿನ ಘಟಕ ಹಸ್ತಾಂತರ

ಕುಡಿಯುವ ನೀರಿನ ಘಟಕ ಹಸ್ತಾಂತರ

Date:

ಉಡುಪಿ, ಮಾ.2: ಕರ್ನಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ಬ್ರಾಹ್ಮಿ ಸಭಾಭವನದಲ್ಲಿ ಸಾರ್ವಜನಿಕ ಬಳಕೆಗಾಗಿ ಉತ್ಕೃಷ್ಟ ಗುಣಮಟ್ಟದ ಶುದ್ಧೀಕರಣ ಸಾಮರ್ಥ್ಯವನ್ನು ಹೊಂದಿರುವ ಯು.ವಿ. ಫಿಲ್ಟರೇಷನ್ ತಂತ್ರಜ್ಞಾನದ ಪ್ರತಿಷ್ಠಿತ ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಪ್ಮೆಂಟ್ ನಿರ್ಮಿತ ಶುದ್ದ ಬಿಸಿ ನೀರು, ಸಾಮಾನ್ಯ ಹಾಗೂ ತಣ್ಣೀರಿನ ಆಯ್ಕೆಗಳ ಮೂರು ನಳಿಕೆಗಳನ್ನು ಹೊಂದಿರುವ ಶುದ್ಧ ಕುಡಿಯುವ ನೀರಿನ ಎರಡು ಘಟಕಗಳನ್ನು ಕರ್ನಾಟಕ ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ವಾದಿರಾಜ ಭಟ್ ಯುವ ಬ್ರಾಹ್ಮಣ ಪರಿಷತ್ತಿನ ಅಧ್ಯಕ್ಷರಾದ ಚಂದ್ರಕಾಂತ ಕೆ. ಎನ್. ರವರಿಗೆ ಹಸ್ತಾಂತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.

ವಾಟರ್ ಕೂಲರ್ ಗಳ ವಾರ್ಷಿಕ ನಿರ್ವಹಣೆಯನ್ನು ಕಲ್ಕೂರ ರೆಪ್ರಿಜಿರೇಶನ್ ಸಂಸ್ಥೆ ನಿಶುಲ್ಕವಾಗಿ ನಿರ್ವಹಿಸುತ್ತದೆ ಎಂದು ಸಂಸ್ಥೆಯ ಮಾಲಕರಾದ ರಂಜನ್ ಕಲ್ಕೂರ ರವರು ಮಾಹಿತಿ ನೀಡಿದರು. ಕರ್ನಾಟಕ ಬ್ಯಾಂಕ್ ಉಡುಪಿ ರಥಬೀದಿ ಶಾಖೆಯ ಸೀನಿಯರ್ ಮ್ಯಾನೇಜರ್ ಪ್ರಶಾಂತ್ ರಾವ್ ಹಾಗೂ ಕುಂಜಿಬೆಟ್ಟು ಶಾಖೆಯ ರಾಧಿಕಾ ಚಂದ್ರಕಾಂತ್, ಯುವ ಬ್ರಾಹ್ಮಣ ಪರಿಷತ್ತಿನ ಕೋಶಾಧಿಕಾರಿ ಕುಮಾರಸ್ವಾಮಿ ಉಡುಪ, ಪೂರ್ವಾಧ್ಯಕ್ಷರಾದ ರಂಜನ್ ಕಲ್ಕೂರ, ಉಪಾಧ್ಯಕ್ಷ ರಘುಪತಿ ರಾವ್, ಸಮಿತಿಯ ಸದಸ್ಯರಾದ ರಂಗನಾಥ್ ಸರಳಾಯ, ನಾರಾಯಣ ಭಟ್, ಕಲ್ಕೂರ ಬಿಲ್ಡರ್ಸ್ ಮತ್ತು ಡೆವಲಪರ್ಸ್ ನ ಪಾಲುದಾರ ರಾಹುಲ್ ಕಲ್ಕೂರ ಮುಂತಾದವರು ಉಪಸ್ಥಿತರಿದ್ದರು. ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಚೈತನ್ಯ ಎಂ. ಜಿ. ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಭಟ್ ಪಣಿಯಾಡಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!