Sunday, October 18, 2026
Sunday, October 18, 2026

ಪಾಂಡೇಶ್ವರ: ಶಾಲೆಗೆ ವಾಹನ ಕೊಡುಗೆ

ಪಾಂಡೇಶ್ವರ: ಶಾಲೆಗೆ ವಾಹನ ಕೊಡುಗೆ

Date:

ಪಾಂಡೇಶ್ವರ, ಮಾ.5: ಕರ್ಣಾಟಕ ಬ್ಯಾಂಕ್ ರಾಜ್ಯಾದ್ಯಂತ ಮನೆಯ ಬ್ಯಾಂಕ್ ಆಗಿ ಪರಿವರ್ತನೆಗೊಂಡಿದೆ. ಇವರ ಸಮಾಜಮುಖಿ ಕಾರ್ಯಕ್ರಮಗಳು ಜನಮೆಚ್ಚುಗೆ ಗಳಿಸಿದೆ ಎಂದು ಪಾಂಡೇಶ್ವರ ಯೋಗಗುರು ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಹೇಳಿದರು. ಬುಧವಾರ ಪಾಂಡೇಶ್ವರದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ಕೊಡ ಮಾಡಿದ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಲೆಗೆ ವಾಹನ ಹಸ್ತಾಂತರಿಸಿ ಮಾತನಾಡಿದ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಮುಖ್ಯ ಪ್ರಬಂಧಕ ಕೆ.ವಾದಿರಾಜ್, ಶತಮಾನ ಕಂಡ ಶಾಲೆಗೆ ಶತಸಂಭ್ರಮದ ಕರ್ಣಾಟಕ ಬ್ಯಾಂಕ್ ಸಹಕಾರ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು. ಶಾಲಾ ಸಂಚಾಲಕ ಫಾ. ಸುನಿಲ್ ಡಿಸಿಲ್ವ ಇವರಿಗೆ ಕರ್ಣಾಟಕ ಬ್ಯಾಂಕ್ ನ ಪ್ರಾದೇಶಿಕ ಕಛೇರಿಯ ಮುಖ್ಯ ಪ್ರಬಂಧಕ ವಾದಿರಾಜ್ ಕೀ ಹಸ್ತಾಂತರಿಸಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಕರ್ಣಾಟಕ ಬ್ಯಾಂಕ್ ಎಜಿಎಂ ಕೆ.ವಾದಿರಾಜ್ ಹಾಗೂ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯಾಯ ಇವರುಗಳನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು. ಕರ್ಣಾಟಕ ಬ್ಯಾಂಕ್ ಐರೋಡಿ ಶಾಖೆಯ ಪ್ರಬಂಧಕ ಮಂಜುನಾಥ ಶೇಟ್, ಅರವಿಂದ ಮೋಟಾಸ್೯ನ ಮಾರ್ಕೆಟಿಂಗ್ ವಿಭಾಗದ ರಾಕೇಶ್ ಇವರುಗಳನ್ನು ಗುರುತಿಸಿ ಗೌರವಿಸಲಾಯಿತು.

ಸಭೆಯಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಪೂಜಾರಿ, ಶಾಲಾ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ರವೀಶ್ ಶ್ರೀಯಾನ್, ಶಾಲಾ ಎಸ್ ಡಿ ಎಂಸಿ ಅಧ್ಯಕ್ಷೆ ಸುಜಾತ ವೆಂಕಟೇಶ ಪೂಜಾರಿ, ಪಾಂಡೇಶ್ವರ ಪಂಚಾಯತ್ ಸದಸ್ಯ ಪ್ರತಾಪ್ ಶೆಟ್ಟಿ ಸಾಸ್ತಾನ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಪೂಜಾರಿ ಸ್ವಾಗತಿಸಿ, ಸುನಿಲ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!