Sunday, October 18, 2026
Sunday, October 18, 2026

ಎನ್ ಎಸ್ ಎಸ್ ವಾರ್ಷಿಕ ಶಿಬಿರಕ್ಕೆ ಶಾಸಕರ ಭೇಟಿ

ಎನ್ ಎಸ್ ಎಸ್ ವಾರ್ಷಿಕ ಶಿಬಿರಕ್ಕೆ ಶಾಸಕರ ಭೇಟಿ

Date:

ಕೋಟೇಶ್ವರ, ಮಾ.5: ಸೌಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ವಾರ್ಷಿಕ ವಿಶೇಷ ಶಿಬಿರಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ಕೊಟ್ಟು ಶಿಬಿರಾರ್ಥಿಗಳೊಂದಿಗೆ ವಿಚಾರ ವಿನಿಮಯ ನಡೆಸಿದರು. ಸ್ಥಳೀಯರ ಸಹಕಾರದಿಂದ ಮತ್ತು ಎಲ್ಲರ ಪರಿಶ್ರಮದಿಂದ ಶಿಬಿರವು ಯಶಸ್ವಿಯಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ಶಾಸಕರನ್ನು ಸ್ಮರಣಿಕೆಯೊಂದಿಗೆ ಸ್ವಾಗತಿಸಿ ಗೌರವಿಸಿದರು. ಐಕ್ಯೂಎಸಿ ಸಂಚಾಲಕರದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ್ ವೈದ್ಯ ಎಂ., ಹಿರಿಯ ಪ್ರಾಧ್ಯಾಪಕರಾದ ಡಾ ಶೇಖರ್ ಬಿ., ಉಪನ್ಯಾಸಕಿ ಶ್ರುತಿ ಆಚಾರ್ಯ ಎನ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ರಕ್ಷಿತ್, ಘಟಕ 1 ಮತ್ತು 2 ರ ಸಂಯೋಜನಾಧಿಕಾರಿಗಳಾದ ರೋಹಿಣಿ ಹಾಗೂ ನಿರಂಜನ ಶರ್ಮಾ, ಸ್ವಯಂಸೇವಕರಾದ ಗೌರೀಶ್, ವಿದ್ಯಾ, ದೀಪಶ್ರೀ, ರಾಘವೇಂದ್ರ, ವೈಷ್ಣವಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!