Saturday, January 17, 2026
Saturday, January 17, 2026

ಜನಸಾಮಾನ್ಯರೊಂದಿಗೆ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ: ಪ್ರತೀಕ್ ಬಾಯಲ್

ಜನಸಾಮಾನ್ಯರೊಂದಿಗೆ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ: ಪ್ರತೀಕ್ ಬಾಯಲ್

Date:

ಉಡುಪಿ, ಮಾ.5: ಜನಸಾಮಾನ್ಯರು ತಮ್ಮ ದೈನಂದಿನ ವ್ಯವಹಾರಗಳಿಗೆ ಬ್ಯಾಂಕುಗಳಿಗೆ ಬಂದಾಗ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ, ಅವರುಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಪೂರಕ ವಾತಾವರಣ ಕಲ್ಪಿಸಿದಾಗ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬ್ಯಾಂಕುಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗದರ್ಶನದ ಅನ್ವಯ ಠೇವಣಿ ಒಟ್ಟು ಮೊತ್ತದ ಶೇ. 60 ರಷ್ಟು ಸಾಲ ವಿತರಣೆ ಮಾಡುವುದರೊಂದಿಗೆ ಸಿ.ಡಿ ಅನುಪಾತವನ್ನು ಹೆಚ್ಚುವಂತೆ ಎಲ್ಲಾ ಬ್ಯಾಂಕ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಕೆಲವು ಬ್ಯಾಂಕ್‌ಗಳಲ್ಲಿ ಸಿ.ಡಿ. ಅನುಪಾತವು ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಸುಧಾರಣೆ ಆಗಬೇಕು ಎಂದರು. ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳನ್ನು ನಿರ್ಮಿಸಲು ಹಾಗೂ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಠಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 131 ಫಲಾನುಭವಿಗಳಿಗೆ, 40.15 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದ ಅವರು, ಪಿ.ಎಂ.ಇ.ಜಿ.ಪಿ ಯೋಜನೆಯಡಿ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ, ಅರ್ಹ ಫಲಾನುಭವಿ ಉದ್ಯಮಿಗಳಿಗೆ ಸಬ್ಸಿಡಿಯನ್ನು ಶೀಘ್ರವಾಗಿ ವಿತರಿಸುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕೃಷಿ ವಲಯಕ್ಕೆ 4439 ನಿಗಧಿತ ಗುರಿಗೆ 3003 ಗುರಿ ಸಾಧಿಸಿ ಶೇ. 67.25, ಎಂ.ಎಸ್.ಎಂ.ಇ ವಲಯಕ್ಕೆ 3425 ಗುರಿ ನಿಗದಿಪಡಿಸಲಾಗಿದ್ದು, 2495 ಗುರಿ ಸಾಧಿಸಿ ಶೇ. 72.85 ರಷ್ಟು, ಶಿಕ್ಷಣ ವಲಯಕ್ಕೆ 139 ನಿಗಧಿತ ಗುರಿಗೆ 113 ಸಾಧನೆ ಮಾಡಿ ಶೇ. 81.15 ರಷ್ಟು, ವಸತಿ ಕ್ಷೇತ್ರಗಳಿಗೆ 369 ನಿಗಧಿತ ಗುರಿಗೆ 197 ಗುರಿ ಸಾಧಿಸಿ ಶೇ. 53.33 ರಷ್ಟು ಹಾಗೂ ಇತರೆ ವಲಯಗಳಿಗೆ 422 ನಿಗಧಿತ ಗುರಿಗೆ, 281 ಗುರಿ ಸಾಧಿಸಿ ಶೇ. 66.66 ಸಾಧನೆ ಮಾಡಲಾಗಿದೆ ಎಂದರು.

ಪಿ.ಎಂ.ಎಫ್.ಎಂ.ಇ ಯೋಜನೆಯಡಿ ನಿಗದಿತ ಗುರಿಗೆ ಹೆಚ್ಚು ಅರ್ಜಿಗಳು ಸ್ವೀಕೃತವಾಗದೇ ಇರುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ಸಿ.ಇ.ಓ ರವರು, ಈ ಯೋಜನೆಯ ಬಗ್ಗೆ ಜನಸಾಮಾನ್ಯರಿಗೆ ಹೆಚ್ಚು ಅರಿವು ಮೂಡಿಸಿ, ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ವಹಿಸಬೇಕು. ಯೋಜನೆಯಡಿ ಅರ್ಜಿ ಸ್ವೀಕೃತವಾದಾಗ ಅರ್ಜಿಗಳು ತಿರಸ್ಕೃತವಾಗದಂತೆ ನೋಡಿಕೊಳ್ಳಬೇಕು. ಸಾಲ ನೀಡುವಾಗ ಯಾವುದೇ ಕುಂದು ಕೊರತೆಗಳು ಎದುರಾದಲ್ಲಿ ಅದನ್ನು ಸರಿಪಡಿಸಿ, ನಿಗಧಿತ ಗುರಿ ಸಾಧನೆಗೆ ಮುಂದಾಗಬೇಕು ಎಂದ ಅವರು, ಪಿ.ಎಂ. ವಿಶ್ವಕರ್ಮ ಯೋಜನೆಯಡಿ ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರವೇ ಕ್ರಮವಹಿಸಬೇಕು ಎಂದರು. ಕೆನರಾ ಬ್ಯಾಂಕ್‌ನ ರೀಜನಲ್ ಮ್ಯಾನೆಜರ್ ಶೀಬ ಸಹಜನ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.48.41 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.48.47 ರಷ್ಟಾಗಿ ಶೇ. 0.06 ರಷ್ಟು ಏರಿಕೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ಅತ್ಯಂತ ಕಳವಳಕಾರಿಯಾದ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಸಿ.ಡಿ ಅನುಪಾತ ಹೆಚ್ಚಿಸಲು ಎಲ್ಲಾ ಬ್ಯಾಂರ‍್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಆರ್.ಬಿ.ಐ ನ ಎಕ್ಸಿಕ್ಯುಟಿವ್ ಇಳಾ ಸಾಹು, ಮಂಗಳೂರು ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ರಾಜೇಶ್ ಶೆಟ್ಟಿ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!