Monday, October 5, 2026
Monday, October 5, 2026

ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ, ಮಾ.5: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.inಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 8 ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 16 ರಂದು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!