ಕಾಪು, ಮಾ.6: ಶ್ರೀ ಹೊಸಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ (ರಿ.) ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನಡೆದ ಒಂಬತ್ತನೇ ದಿನದ ಧಾರ್ಮಿಕ ಸಭೆ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಕಟಪಾಡಿ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಆನಂತಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿ ಹಾಗೂ ಜಗದ್ಗುರು ಶ್ರೀ ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನಂ ಪಲಿಮಾರು ಹೃಷಿಕೇಶ ತೀರ್ಥ ಮಠದ ಶ್ರೀ ವಿಧ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಉದ್ಯಮಿಗಳಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಪ್ರಧಾನ ತಂತ್ರಿಗಳಾದ ಜ್ಯೋತಿಷ್ಯ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ, ಕಾಪು ತಹಶೀಲ್ದಾರರಾದ ಪ್ರತಿಭಾ ಆರ್ ಮುಂತಾದವರು ಉಪಸ್ಥಿತರಿದ್ದರು.
ಚಂಡಿಕಾಯಾಗ: ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನವದಿನಗಳ ಪರ್ಯಂತ ಅತ್ಯಂತ ವಿಜ್ರಂಭಣೆಯಿಂದ ನಡೆದಿದ್ದು ಲಕ್ಷಾಂತರ ಭಕ್ತರು ಅಮ್ಮನ ದರುಶನ ಪಡೆದು ಕೃತಾರ್ಥರಾದರು, ಇದೀಗ ನೂತನ ದೇಗುಲದಲ್ಲಿ, ಇಂದಿನಿಂದ ಮುಂದಿನ 48 ದಿನಗಳ ಕಾಲ ನಿತ್ಯ ನಿರಂತರವಾಗಿ ಅಮ್ಮನ ಕ್ಷೇತ್ರದಲ್ಲಿ ಚಂಡಿಕಾಯಾಗ ನಡೆಯಲಿದ್ದು, ಸೇವೆಯನ್ನು ನೀಡಲು ಇಚ್ಚಿಸುವ ಭಕ್ತರು ಈ ಕೂಡಲೇ ಕಚೇರಿಯನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.




By
ForthFocus™