Monday, July 27, 2026
Monday, July 27, 2026

ಬಾರಕೂರು ಕಾಲೇಜು: ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಬಾರಕೂರು ಕಾಲೇಜು: ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Date:

ಬಾರಕೂರು, ಮಾ.6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಐಕ್ಯೂಎಸಿ ಮತ್ತು ಸಮಾಜಕಾರ್ಯ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ ಸಳ್ವಾಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಜೀವನ ಕೌಶಲ್ಯಗಳು ಮಾನವನ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕು. ಜ್ಞಾನದೊಂದಿಗೆ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು ಎಂದರು.

ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಅವರು ವಿವಿಧ ಚಟುವಟಿಕೆಗಳ ಮೂಲಕ ನಾಯಕತ್ವ ಮತ್ತು ಸಂವಹನ ಕಲೆ ಬಗ್ಗೆ ತರಬೇತಿ ನಡೆಸಿಕೊಟ್ಟರು. ರೋವರ್ಸ್ ಲೀಡರ್ ಸತೀಶ್ ಕುಮಾರ್ ಬಿ.ಡಿ ಉಪಸ್ಥಿತರಿದ್ದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ಎನ್.ಎ., ಅವರು ಕಾರ್ಯಕ್ರಮ ಸಂಘಟಿಸಿ ನಿರ್ವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!