Saturday, February 7, 2026
Saturday, February 7, 2026

ಶಂಕರನಾರಾಯಣ ಪದವಿ ಕಾಲೇಜಿಗೆ ಎರಡು ರ್‍ಯಾಂಕ್

ಶಂಕರನಾರಾಯಣ ಪದವಿ ಕಾಲೇಜಿಗೆ ಎರಡು ರ್‍ಯಾಂಕ್

Date:

ಬೈಂದೂರು, ಮಾ.8: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿನ ಇಬ್ಬರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯ 2023-24 ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಗಳಲ್ಲಿ ರ್‍ಯಾಂಕ್ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಅಕ್ಷತಾ ಶೆಟ್ಟಿ ಎರಡನೇ ರ್‍ಯಾಂಕ್, ನಿರ್ವಹಣಾ ವಿಭಾಗದಲ್ಲಿ ಸ್ನೇಹದಾಸ್ 6ನೇ ರ್‍ಯಾಂಕ್ ಪಡೆದಿರುತ್ತಾರೆ. ಅಕ್ಷತಾ ಶೆಟ್ಟಿ ಹಾಲಾಡಿ ಸಮೀಪದ ಕಕ್ಕುಂಜೆಯ ಕರುಣಾಕರ್ ಶೆಟ್ಟಿ ಮತ್ತು ಮೂಕಾಂಬಿಕ ಶೆಟ್ಟಿ ದಂಪತಿಗಳ ಪುತ್ರಿ. ಸಾಯ್ಬ್ರಕಟ್ಟೆಯ ಮಂಜುನಾಥ್ ದಾಸ್ ಮತ್ತು ವತ್ಸಲಾ ದಾಸ್ ಅವರ ಪುತ್ರಿ ಸ್ನೇಹದಾಸ್ ಬಿಬಿಎ ಪದವಿಯಲ್ಲಿ 6ನೇ ರ್‍ಯಾಂಕ್ ಪಡೆದಿದ್ದಾರೆ. 20 ವರ್ಷಗಳ ನಂತರ ಪದವಿಯಲ್ಲಿ ಎರಡು ರ್‍ಯಾಂಕ್ ಪಡೆದು ಗ್ರಾಮೀಣ ಭಾಗದ ಉನ್ನತ ಶಿಕ್ಷಣ ಕೇಂದ್ರವಾಗಿ ಕಾಲೇಜು ಹೊರಹೊಮ್ಮಿದೆ. ಕಳೆದ ಸಾಲಿನಲ್ಲಿ ನ್ಯಾಕ್ ಮಾನ್ಯತೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕಾಲೇಜು ಸಾಧನೆಯ ಹಾದಿಯಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿದೆ.

ವಿದ್ಯಾರ್ಥಿಗಳ ಅಮೋಘ ಸಾಧನೆಗೆ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವೃಂದ, ಹಳೆ ವಿದ್ಯಾರ್ಥಿ ಸಂಘ, ಶಿಕ್ಷಕ ರಕ್ಷಕ ಸಂಘ ಮತ್ತು ಸಾರ್ವಜನಿಕರು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!