ಕಲ್ಯಾಣಪುರ, ಮಾ.8: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಡಿದ ಅವರು, ಕೇಂದ್ರ ಸರ್ಕಾರದ ಆಯುಷ್ಮಾನ್ ಆರೋಗ್ಯ ಮಂದಿರ ಯೋಜನೆಯಡಿ ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಶೀಘ್ರವಾಗಿ ನಿರ್ಮಾಣಗೊಳ್ಳಲಿರುವ ಆರೋಗ್ಯ ಸ್ವಾಸ್ಥ್ಯ ಕೇಂದ್ರದ ಮೂಲಕ ಉತ್ತಮ ಸೇವೆ ನೀಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಿದೆ ಎಂದರು.
ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ ಕುಂದರ್, ಉಪಾಧ್ಯಕ್ಷರಾದ ಪ್ರೇಮಲತಾ, ಗಣಪತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ದೇವಾಡಿಗ, ಸತೀಶ್ ನಾಯ್ಕ್, ನವೀನ್ ಕಾಂಚನ್, ಜಾನ್ಸನ್, ಪ್ರಶಾಂತ್, ಅನಿತಾ, ರತ್ನ ಕೇಶವ, ಗುರುರಾಜ್ ಗಾಣಿಗ, ಶ್ರೀಧರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




By
ForthFocus™