Saturday, January 17, 2026
Saturday, January 17, 2026

ಕೆ.ಎಂ.ಸಿ ಮಣಿಪಾಲ ಸಹಕಾರದೊಂದಿಗೆ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ, ಡಯಾಲಿಸಿಸ್ ಸೇವೆಗಳ ಆರಂಭ

ಕೆ.ಎಂ.ಸಿ ಮಣಿಪಾಲ ಸಹಕಾರದೊಂದಿಗೆ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ, ಡಯಾಲಿಸಿಸ್ ಸೇವೆಗಳ ಆರಂಭ

Date:

ಬೈಂದೂರು, ಮಾ.8: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಮತ್ತು ಆರೈಕೆ, ಡಯಾಲಿಸಿಸ್ ಮತ್ತು ವಿಶೇಷ ಆರೋಗ್ಯ ಸೇವೆಗಳನ್ನು ಪ್ರಾರಂಭಿಸುವ ಮೂಲಕ ತನ್ನ ಆರೋಗ್ಯ ಸೇವೆಗಳನ್ನು ವಿಸ್ತರಿಸಿದೆ. ಹೊಸ ಸೌಲಭ್ಯಗಳನ್ನು ಶನಿವಾರ ಉದ್ಘಾಟಿಸಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಹೆ ಬೋಧನಾ ಆಸ್ಪತ್ರೆಯ ಸಿಒಒ ಡಾ. ಆನಂದ್ ವೇಣುಗೋಪಾಲ್; ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮತ್ತು ಅಂಜಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಅಣ್ಣಪ್ಪ ಶೆಟ್ಟಿ ಉಪಸ್ಥಿತರಿದ್ದರು. ಡಾ. ಅಣ್ಣಪ್ಪ ಶೆಟ್ಟಿ ಅವರು ಅಂಜಲಿ ಆಸ್ಪತ್ರೆ ಬೆಳೆದು ಬಂದ ದಾರಿಯ ಕಿರು ನೋಟ ನೀಡಿ ಸ್ವಾಗತಿಸಿದರು. ಡಾ. ಎಚ್.ಎಸ್. ಬಲ್ಲಾಳ ಅವರು ಹೊಸ ಆರೋಗ್ಯ ಸೇವೆಗಳನ್ನು ಅಧಿಕೃತವಾಗಿ ಉದ್ಘಾಟಿಸಿ ಮಾತನಾಡುತ್ತಾ, ಸೇವೆ ವಂಚಿತ ಪ್ರದೇಶಗಳಿಗೆ ವೈದ್ಯಕೀಯ ಪ್ರವೇಶವನ್ನು ವಿಸ್ತರಿಸುವ ಮಹತ್ವ ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ಆರೋಗ್ಯ ಸೇವೆಯ ಬೆಳವಣಿಗೆ ಮತ್ತು ಹೊಸ ಸೇವೆಗಳು ಸಮುದಾಯದ ಮೇಲೆ ಬೀರುವ ಸಕಾರಾತ್ಮಕ ಪರಿಣಾಮದ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ನಾಕಟ್ಟೆ ತಿಮ್ಮಪ್ಪ ಶೆಟ್ಟಿ ಅವರು ತುರ್ತು ಆರೈಕೆ ಸೇವೆಗಳನ್ನು ಉದ್ಘಾಟಿಸಿ ಮಾತನಾಡುತ್ತಾ, ಬೈಂದೂರು ಮುಂತಾದ ಗ್ರಾಮೀಣ ಪ್ರದೇಶಗಳಲ್ಲಿ ತ್ವರಿತ, ವಿಶ್ವಾಸಾರ್ಹ ವೈದ್ಯಕೀಯ ಆರೈಕೆಯ ಅಗತ್ಯವನ್ನು ಎತ್ತಿ ತೋರಿಸಿದರು. ಈ ಹೊಸ ಸೌಲಭ್ಯವು ಜೀವಗಳನ್ನು ಉಳಿಸುವಲ್ಲಿ ಮತ್ತು ಅಗತ್ಯ ತುರ್ತು ಸೇವೆಗಳನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಭರವಸೆ ನೀಡಿದರು. ಗುರುರಾಜ್ ಗಂಟಿಹೊಳೆ ಅವರು ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ವಿಶೇಷ ಆರೈಕೆ ನೀಡುವ ಮಹತ್ವದ ಬಗ್ಗೆ ಮಾತನಾಡಿದರು. ಅವರು ಈ ಉಪಕ್ರಮಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ಈ ಪ್ರದೇಶಕ್ಕೆ ವಿಶ್ವ ದರ್ಜೆಯ ಆರೋಗ್ಯ ಸೇವೆಗಳನ್ನು ತರುವ ಪ್ರಯತ್ನಗಳನ್ನು ಶ್ಲಾಘಿಸಿದರು. ಡಾ. ಆನಂದ್ ವೇಣುಗೋಪಾಲ್ ನವೀಕೃತ ಫಾರ್ಮಾಸಿಯನ್ನು ಉದ್ಘಾಟಿಸಿದರು.

ಅಂಜಲಿ ಆಸ್ಪತ್ರೆಯಲ್ಲಿ ಕಸ್ತೂರ್ಬಾ ಆಸ್ಪತ್ರೆಯಿಂದ ಬೆಂಬಲಿತವಾದ ಆರೋಗ್ಯ ಸೇವೆಗಳ ಅವಲೋಕನವನ್ನು ಡಾ. ಅವಿನಾಶ್ ಶೆಟ್ಟಿ ಒದಗಿಸಿದರು. ಈಗ ತುರ್ತು ಚಿಕಿತ್ಸೆ ಡಯಾಲಿಸಿಸ್ ಮತ್ತು ಮೂತ್ರಪಿಂಡ ತಜ್ಞರ ಸಮಾಲೋಚನೆ ಸೇವೆಗಳನ್ನು ಮಾರ್ಚ್ 20ರಿಂದ ಆರಂಭಿಸುತ್ತಿದ್ದು ಮುಂದೆ ಹೃದ್ರೋಗ, ಮೂಳೆಚಿಕಿತ್ಸೆ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ನೇತ್ರವಿಜ್ಞಾನ, ಶಸ್ತ್ರಚಿಕಿತ್ಸೆ, ಸೇರಿದಂತೆ ವಿಶೇಷ ಸಮಾಲೋಚನಾ ಸೇವೆಗಳನ್ನು ಆರಂಭಿಸಲಿದ್ದೇವೆ. ವೈದ್ಯಕೀಯ ಆರೈಕೆಯ ಉನ್ನತ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಎರಡು ಸಂಸ್ಥೆಗಳ ನಡುವಿನ ಸಹಯೋಗವನ್ನು ವಿವರಿಸಿದರು. ಮಣಿಪಾಲದ ಮಾರ್ಕೆಟಿಂಗ್ ಮ್ಯಾನೇಜರ್ ಮೋಹನ್ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!