Saturday, February 7, 2026
Saturday, February 7, 2026

ಕ.ಸಾ.ಪ ಯಾರ ಸ್ವಂತ ಸ್ವತ್ತಲ್ಲ: ವಸಂತಿ ಶೆಟ್ಟಿ

ಕ.ಸಾ.ಪ ಯಾರ ಸ್ವಂತ ಸ್ವತ್ತಲ್ಲ: ವಸಂತಿ ಶೆಟ್ಟಿ

Date:

ಉಡುಪಿ, ಮಾ.9: ಕಸಾಪ ಯಾರ ಸ್ವಂತ ಸ್ವತ್ತು ಅಲ್ಲ. ಅದು ನಮ್ಮೆಲ್ಲರ ಸೊತ್ತು. ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಎಲ್ಲರನ್ನು ಸಮಾನ ವೇದಿಕೆಯಲ್ಲಿ ಕರೆದುಕೊಂಡು ಹೋಗುವ ಉದ್ದೇಶ ಇರಬೇಕು ಎಂದು ಕಸಾಪ ಉಡುಪಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಹೇಳಿದರು.

ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮಹಿಳೆಯರು ಇಂದು ಎಲ್ಲಾ ರಂಗದಲ್ಲೂ ಸಾಧನೆ ಮಾಡಿದ್ದಾರೆ ಇದಕ್ಕೆ ಮೂಲ ಕಾರಣ ಅವರಿಗೆ ನೀಡಿದ ಬೆಂಬಲ ಇಂದು ಹೆಣ್ಣು ಬ್ರೂಣ ಹತ್ಯೆ ಹೆಚ್ಚಿನ ಕಡೆಯಲ್ಲಿ ನಡೆಯುತ್ತಿರುವುದು ಅತ್ಯಂತ ಕಳವಳಕಾರಿ ವಿಷಯ. ಅಂತರಾಷ್ಟ್ರೀಯ ಮಹಿಳಾ ದಿನ ಮಾತ್ರವಲ್ಲದೆ ಪ್ರತಿದಿನವೂ ಕೂಡ ಮಹಿಳಾ ದಿನ ಆಗಬೇಕು ಎಂದು ಹೇಳಿದರು

ಮುಖ್ಯ ಅತಿಥಿಯಾಗಿದ್ದ ವಿದೂಷಿ ಪ್ರತಿಭಾ ಎಲ್ ಸಾಮಗ ಮಾತನಾಡುತ್ತಾ, ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುವಂತೆ, ಯಶಸ್ವಿ ಮಹಿಳೆಯ ಹಿಂದೆ ಒಬ್ಬ ಪುರುಷ ಇದ್ದರೆ ಮಹಿಳೆಯರು ಎಲ್ಲಾ ರಂಗದಲ್ಲಿ ಸಾಧನೆ ತೋರಲು ಸಾಧ್ಯ ಎಂದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಕೋಟ ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಕಸಾಪ ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ರಂಜನಿ ವಸಂತ್, ದೀಪಾ ಚಂದ್ರಕಾಂತ, ಉಮೇಶ್ ಆಚಾರ್ಯ, ಗಣೇಶ್ ಬ್ರಹ್ಮಾವರ, ಸುಧಾಕರ್ ಶೆಟ್ಟಿ, ವಸಂತ್, ಡಾ. ಸುಚರಿತ ರಾಜೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಕಸಾಪ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್ ಪಿ. ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಜನಾರ್ದನ್ ಕೊಡವೂರು ವಂದಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕರ್ವಾಲ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!