Sunday, October 18, 2026
Sunday, October 18, 2026

ಮಣಿಪಾಲ: ಡೆಂಗ್ಯೂ, ಮಲೇರಿಯಾ ತಡೆಗೆ ಸಮುದಾಯದ ಸ್ವಚ್ಛತಾ ಅಭಿಯಾನ

ಮಣಿಪಾಲ: ಡೆಂಗ್ಯೂ, ಮಲೇರಿಯಾ ತಡೆಗೆ ಸಮುದಾಯದ ಸ್ವಚ್ಛತಾ ಅಭಿಯಾನ

Date:

ಮಣಿಪಾಲ, ಮಾ.10: ರೋಗ ನಿರೋಧಕತೆ ಮತ್ತು ಸಮುದಾಯದ ಆರೋಗ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ, ರೋಟರಿ ಮಣಿಪಾಲ ಹಿಲ್ಸ್‌ನ ನೇತೃತ್ವದಲ್ಲಿ ಮನ್ನಾಪಳ್ಳದ 20 ಎಕರೆ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ರೊಟೇರಿಯನ್ಸ್ ಎಗೇನ್ಸ್ಟ್ ಮಲೇರಿಯಾ ಗ್ಲೋಬಲ್ ಸಂಸ್ಥೆ ಬೆಂಬಲ ನೀಡಿದೆ. ಮಣಿಪಾಲವನ್ನು ಮಲೇರಿಯಾ ಮತ್ತು ಡೆಂಗ್ಯೂ ಮುಕ್ತವಾಗಿಸುವ ಗುರಿಯನ್ನು ಈ ಅಭಿಯಾನ ಹೊಂದಿದ್ದು ಹುಡ್ಕೋ ಕಾಲೋನಿ ನಿವಾಸಿಗಳು, ಎಂಐಟಿ ಎನ್ಎಸ್ಎಸ್ ಘಟಕಗಳು ಮತ್ತು ಉಡುಪಿ ನಗರಸಭೆಯ ಸದಸ್ಯರು ಪಾಲ್ಗೊಂಡರು.

ರೋಟರಿ ಮಣಿಪಾಲ ಹಿಲ್ಸ್‌ನ ಅಧ್ಯಕ್ಷರು ಅಭಿಯಾನದ ಔಚಿತ್ಯದ ಕುರಿತು ಮಾತನಾಡಿದರು. ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಮತ್ತು ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ ಉಪಸ್ಥಿತರಿದ್ದು, ಅಭಿಯಾನವನ್ನು ಶ್ಲಾಘಿಸಿದರು.

ಅಭಿಯಾನ ಪ್ರತಿ ತಿಂಗಳ ಎರಡನೇ ಭಾನುವಾರದಂದು ಮಳೆಗಾಲ ಆರಂಭವಾಗುವವರೆಗೆ ನಡೆಯಲಿದೆ. ಸಮುದಾಯದ 9 ವಾರ್ಡ್‌ಗಳು ಮತ್ತು 7 ಉಪ ಕೇಂದ್ರಗಳಿಗೆ ಸೊಳ್ಳೆ ಪರದೆಗಳನ್ನ ಒದಗಿಸಲು, ಸಂತಾನೋತ್ಪತ್ತಿ ತಾಣಗಳನ್ನು ಗುರುತಿಸಿ ನಾಶಪಡಿಸಲು ಹಾಗೂ ಶಾಲಾ ಮಕ್ಕಳು ಮತ್ತು ಸಮುದಾಯದ ಸುರಕ್ಷತೆಗಾಗಿ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವ ಬಗ್ಗೆ ಶಿಕ್ಷಣ ನೀಡುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!