Sunday, October 18, 2026
Sunday, October 18, 2026

ಪಂಚವರ್ಣ ಸಂಘಟನೆ ದೇಶದ ಆಸ್ತಿ

ಪಂಚವರ್ಣ ಸಂಘಟನೆ ದೇಶದ ಆಸ್ತಿ

Date:

ಕೋಟ, ಮಾ.10: ಎಲ್ಲಿ ಮಹಿಳೆಯನ್ನು ಪೂಜನೀಯ ಸ್ಥಾನದಲ್ಲಿ ನೋಡುವ ಮನಸ್ಥಿತಿ ಇರುತ್ತದೆಯೋ ಅಲ್ಲಿ ದೇವತೆಗಳು ನೆಲೆಯಾಗಿರುತ್ತದೆ ಎಂಬ ವಿಚಾರ ಈ ಭರತ ಭೂಮಿಯ ಪರಂಪರೆಯಲ್ಲಿದೆ. ಹೆಣ್ಣನ್ನು ಗೌರವಿಸುವ ಮನಸ್ಥಿತಿ ನಮ್ಮ ಅಕ್ಕಪಕ್ಕದಲ್ಲಿದ್ದಾಗ ಆಕೆ ಸದೃಢವಾಗಿ ಬೆಳೆಯಲು ಸಾಧ್ಯ ಎಂದು ಬೀಜಾಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಭಾನುವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಭಾಗಿತ್ವದಡಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನಿಸಿ ಅವರು ಮಾತನಾಡಿದರು. ಪಂಚವರ್ಣ ಸಂಘಟನೆಯ ಕಾರ್ಯಕ್ರಮಗಳು ಸಾಮಾಜಿಕ, ಶೈಕ್ಷಣಿಕ ಮತ್ತು ಪರಿಸರಕ್ಕೆ ಪೂರಕವಾಗಿದ್ದು ಕೇವಲ ವಾರ್ಷಿಕೋತ್ಸವಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಇತರ ಸಂಸ್ಥೆಗಳಿಗೂ ಮಾದರಿ ಎಂದರು. ಸಾಧಕಿ ಪ್ರೇಮ ಎಸ್ ಶೆಟ್ಟಿ ಇವರಿಗೆ ಪಂಚವರ್ಣ ಸಾಧಕ ಮಹಿಳಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿಷ್ಣುಮೂರ್ತಿ ಮಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಎಂ ಬಾಯರಿ ನಿರೂಪಿಸಿದರು. ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು. ಪಂಚವರ್ಣ ಸಲಹಾ ಸಮಿತಿಯ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!