Tuesday, October 20, 2026
Tuesday, October 20, 2026

ಹೆಬ್ರಿ: ಸಂಕಲ್ಪ ದಿವಸ

ಹೆಬ್ರಿ: ಸಂಕಲ್ಪ ದಿವಸ

Date:

ಹೆಬ್ರಿ, ಮಾ.10: ಪಿ.ಆರ್.ಎನ್. ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲ್ಪ ದಿವಸ ಕಾರ್ಯಕ್ರಮ ಅನ್ನಪೂರ್ಣ ಸಭಾಂಗಣದಲ್ಲಿ ನಡೆಯಿತು. ಬಡತನ ಶಾಪವಲ್ಲ, ಬಡತನವನ್ನು ಜಯಿಸಿ ನಮ್ಮ ಗುರಿಯ ಕಡೆಗೆ ಸಾಗಬೇಕು. ಬಡತನವನ್ನೇ ನಮ್ಮ ಅಸ್ತ್ರವನ್ನಾಗಿಸಿಕೊಳ್ಳಬೇಕು. ಸಮಾಜದಲ್ಲಿನ ಹಲವಾರು ಅನಿಷ್ಟಗಳಿಂದ ದೂರವಿರಬೇಕು. 10ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ನಿಮ್ಮ ಶಾಲೆಯು ಗುರುತಿಸುವಂತೆ ಆಗಲಿ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದಿವಾಕರ ಮರಕಾಲ ಮಾತನಾಡಿದರು.

ವೇದಿಕೆಯಲ್ಲಿ ಆಡಳಿತ ಮಂಡಳಿ ಅಮೃತ ಭಾರತಿ ವಿದ್ಯಾಲಯ ಅಧ್ಯಕ್ಷರಾದ ಶೈಲೇಶ್ ಕಿಣಿ ತಮ್ಮ ಅಧ್ಯಕ್ಷೀಯ ಮಾತಿನಲ್ಲಿ, 10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗಲಿ, ಸಂಸ್ಥೆಯು ನಿಮ್ಮಿಂದ ಕೀರ್ತಿ ಗಳಿಸಲಿ ಎಂದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಅಪರ್ಣಾ ಆಚಾರ್, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯ ಕುಮಾರ್ ಶೆಟ್ಟಿ, ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನನ್ಯ ನಾಯಕ್, ಸಚಿನ್ ಕುಮಾರ್ ತಮ್ಮ ಅನಿಸಿಕೆಗಳನ್ನು ಹೇಳಿಕೊಂಡರು. ವಿದ್ಯಾರ್ಥಿಗಳಿಗೆ ಶಾಲೆಯ ಕಡೆಯಿಂದ ಹಣತೆಯನ್ನು ಮತ್ತು ಕಾಣಿಕೆಯಾಗಿ ಲೇಖನಿ ಮತ್ತು ಸಾಂಕೇತಿಕವಾಗಿ ಪ್ರವೇಶ ಪತ್ರವನ್ನು ವಿತರಿಸಲಾಯಿತು. ಪಂಚಮಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಸುಮನ್ ನಾಯಕ್ ಗುರೂಜಿ ಸ್ವಾಗತಿಸಿ, ಸುಮನ ವಾಣಿ ಮಾತಾಜಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.19: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್...
error: Content is protected !!