ಸೌಕೂರು, ಮಾ.10: ಶ್ರೀ ಕಾಳವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಸೌಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪಿ.ಕಿಶನ್ ಹೆಗ್ಡೆ ಮಾತನಾಡುತ್ತಾ, ಶಿಬಿರದಲ್ಲಿ ವಿದ್ಯಾರ್ಥಿಗಳು ಕೈಗೊಂಡ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಲಿತ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು ಸಾಧ್ಯ ಎಂದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಮತ್ತು ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ರವಿಚಂದ್ರ ಹೆಚ್ ಎಸ್., ಸ.ಹಿ ಪ್ರಾ ಶಾಲೆ ಸೌಕೂರು ಇಲ್ಲಿನ ಮುಖ್ಯೋಪಾಧ್ಯಾಯರಾದ ನಮ್ರತಾ, ಗ್ರಾಮ ಪಂಚಾಯತ್ ಗುಲ್ವಾಡಿ ಇಲ್ಲಿನ ಸದಸ್ಯರಾದ ಸುರೇಂದ್ರ ಶೆಟ್ಟಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಭಾಕರ ಖಾರ್ವಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಎನ್ ಎಸ್ ಎಸ್ ಸಂಯೋಜನಾಧಿಕಾರಿ ರೋಹಿಣಿ ಮತ್ತು ನಿರಂಜನ ಶರ್ಮಾ ಉಪಸ್ಥಿತರಿದ್ದರು. ಎನ್ ಎಸ್ ಎಸ್ ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರದೀಪ್ ಹಾಗೂ ವೈಷ್ಣವಿ ಉಪಸ್ಥಿತರಿದ್ದರು. ಸ್ವಯಂ ಸೇವಕರಾದ ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಶಿಬಿರವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಸ್ಥಳೀಯರಾದ ರಂಜಿತ್, ರಾಹುಲ್, ನಾಗರಾಜ ಭಟ್ ಇವರನ್ನು ಗೌರವಿಸಲಾಯಿತು.




By
ForthFocus™