Wednesday, October 21, 2026
Wednesday, October 21, 2026

ಕಡೆಕಾರು: ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

ಕಡೆಕಾರು: ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Date:

ಕಡೆಕಾರು, ಮಾ.10: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಶಾಖೆ ಇವರ ಆಶ್ರಯದಲ್ಲಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವರ ಸಹಯೋಗದೊಂದಿಗೆ ಒಂದು ದಿನದ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಉಡುಪಿಯ ಕಡೆಕಾರು ಬಿಲ್ಲವ ಭವನದಲ್ಲಿ ನಡೆಯಿತು. ಡಾ. ಎ.ವಿ. ಬಾಳಿಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ್ದರು. ಅಧ್ಯಾಪಕರಾದ ಡಾ. ಮಣಿಭೂಷಣ್ ಡಿಸೋಜ, ಪುರುಷೋತ್ತಮ ಪ್ರಣೀತ್ ತೆಂಡುಲ್ಕರ್, ಡಾ. ಸುಜಾತಾ ಶೇಟ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ನಿಕೇತನ ಸ್ವಾಗತಿಸಿ, ಯೋಜನಾಧಿಕಾರಿ ವಿದ್ಯಾ. ಡಿ. ವಂದಿಸಿದರು. 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!