ಕಾಪು, ಮಾ.10: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅವಧಿಯಲ್ಲಿ ಲಕ್ಷಾಂತರ ಭಕ್ತರನ್ನು ಆಕರ್ಷಿಸಿದ ಕಾಪು ಶ್ರೀ ಹೊಸ ಮಾರಿಗುಡಿಗೆ ರಾಜಕೀಯ ಧುರೀಣ ಜನಾರ್ದನ ಪೂಜಾರಿಯವರು ಭೇಟಿ ನೀಡಿ ದೇವಾಲಯ ಮೂಡಿಬಂದ ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅನ್ನ ಪ್ರಸಾದ ಸ್ವೀಕರಿಸಿದರು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.




By
ForthFocus™