ಕಾಪು, ಮಾ.10: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು. ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗ್ಗೇರ್ ಜಡ್ಡು – ಮೂತ್ತೂರು – ಕೊಂಡಾಡಿ ಸಂಪರ್ಕ ಸೇತುವೆ ಮತ್ತು ರಸ್ತೆ ಅಭಿವೃದ್ಧಿಗೆ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 3 ಕೋಟಿ, ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದಿ ಗ್ರಾಮದ ಪಾಣಾರಬೆಟ್ಟು ರಸ್ತೆ ಅಭಿವೃದ್ಧಿ 50 ಲಕ್ಷ, ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜಾರು ಗ್ರಾಮ ದುರ್ಗಾನಗರ ಮರಾಠಿ ಸಂಘ ರಸ್ತೆ ಅಭಿವೃದ್ಧಿ 25 ಲಕ್ಷ ಸೇರಿದಂತೆ ಒಟ್ಟು 3 ಕೋಟಿ 75 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.
ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ ಕೆ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.




By
ForthFocus™