Tuesday, July 28, 2026
Tuesday, July 28, 2026

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Date:

ಕಾಪು, ಮಾ.11: ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು ಆಂಗ್ಲ ಭಾಷಾ ವಿಭಾಗ ಹಾಗೂ ಮಹಿಳಾ ವೇದಿಕೆಯ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಯಾಗಿ ಸ್ವಸ್ತಿಕಾ ಪ್ರಥಮ ದರ್ಜೆ ಕಾಲೇಜು ಮಂಗಳೂರು ಪ್ರಾಂಶುಪಾಲರಾದ ಡಾ. ಮಾಲಿನಿ ಹೆಬ್ಬಾರ್‌ ಮಾತನಾಡುತ್ತಾ, ಮಹಿಳೆಯರು ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಾರೆ ಮತ್ತು ಪುರುಷರಂತೆಯೇ ದಕ್ಷರಾಗಿದ್ದಾರೆ, ಆದರೆ ಎಲ್ಲೆಡೆ ಸಮಾನ ಅವಕಾಶವನ್ನು ನಿರಾಕರಿಸಲಾಗುತ್ತದೆ. ಪುರುಷರಿಗೆ ಮಹಿಳೆಯರನ್ನು ಗೌರವಿಸುವ ಬಗ್ಗೆ ಅರಿವು ಮೂಡಿಸಬೇಕು. ಮಹಿಳೆಯರು ತಾವು ಶ್ರೇಷ್ಠರೆಂದು ಹೇಳಿಕೊಳ್ಳುತ್ತಿಲ್ಲ, ಆದರೆ ಅವರು ಖಂಡಿತವಾಗಿಯೂ ಪುರುಷರಿಗಿಂತ ಕೆಳಮಟ್ಟದಲ್ಲಿಲ್ಲ. ನಾವು ಕೇಳುತ್ತಿರುವುದು ಸಮಾನತೆ ಮಾತ್ರ ಎಂದರು. ಅವರು ವಿವಿಧ ವಿಭಾಗಗಳ ಮಹಿಳಾ ಸಾಧಕರ ಸಾಧನೆಯ ಬಗ್ಗೆ ಚಿತ್ರ ಪ್ರದರ್ಶನ ಹಾಗೂ ಮಹಿಳಾ ಲೇಖಕಿಯರ ಪುಸ್ತಕ ಪ್ರದರ್ಶನವನ್ನು ಅನಾವರಣಗೊಳಿಸಿದರು.

ಸಂಪನ್ಮೂಲ ವ್ಯಕ್ತಿ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ. ರಾಜಲಕ್ಷ್ಮಿ ಮಾತನಾಡುತ್ತಾ, ಮಹಿಳೆ ದೈಹಿಕ ಕಾಯಿಲೆಗಳ ಬಗ್ಗೆ, ಹದಿಹರೆಯದ ಸಮಸೈಗಳು, ಆಹಾರ ಕ್ರಮ, ಯೋಗ, ಪ್ರಾಣಾಯಮ. ಉತ್ತಮ ಆಹಾರ ಪದ್ದತಿಗಳ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಗೋಪಾಲಕ್ರಷ್ಣ ಗಾಂವಕರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ದೀಪಿಕಾ ಸುವರ್ಣ ಸ್ವಾಗತಿಸಿದರು, ಮಹಿಳಾ ವೇದಿಕಯ ಸಂಘಟಕರಾದ ಯಶೋದಾ ವಂದಿಸಿದರು. ವಿದ್ಯಾರ್ಥಿನಿಯರಾದ ಸುಶ್ಮಿತ ಮತ್ತು ನಿಧಿ ಪ್ರಾರ್ಥಿಸಿದರು. ರಕ್ಷಾಶ್ರೀ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!