Wednesday, July 29, 2026
Wednesday, July 29, 2026

ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಸೈಕಲ್ ಜಾಥಾ

ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಸೈಕಲ್ ಜಾಥಾ

Date:

ಉಡುಪಿ, ಮಾ.11: ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿ ಇದರ ಇಕೋ ಕ್ಲಬ್ ವತಿಯಿಂದ ಉಡುಪಿ ನಗರದಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರದ ಅರಿವು ಮೂಡಿಸಲು 7 ಕಿಲೋಮೀಟರ್ ಸೈಕಲ್ ಜಾಥವನ್ನು ಆಯೋಜಿಸಲಾಯಿತು. ಪ್ಲಾಸ್ಟಿಕ್ ಮುಕ್ತ ಪರಿಸರ ನಮ್ಮ ಆರೋಗ್ಯ ಮತ್ತು ಪ್ರಕೃತಿಗೆ ಒಳಿತು. ನಾವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಮತ್ತು ಪರ್ಯಾಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು. ಮಣ್ಣು, ನೀರು, ವಾಯುವಿಗೆ ಹಾನಿ ಉಂಟುಮಾಡುವ ಪ್ಲಾಸ್ಟಿಕ್ ತ್ಯಜಿಸುವುದು ನಮ್ಮ ಜವಾಬ್ದಾರಿ. ಸ್ವಚ್ಛ ಮತ್ತು ಸುಂದರ ಭವಿಷ್ಯಕ್ಕಾಗಿ, ಪ್ಲಾಸ್ಟಿಕ್ ಮುಕ್ತ ಜೀವನ ಶೈಲಿ ಅಳವಡಿಸೋಣ ಎನ್ನುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪ್ರಾಚಾರ್ಯರಾದ ಡಾ.ಸುಕನ್ಯಾ ಮೇರಿ ಜೆ. ಜಾಥಾಗೆ ಹಸಿರು ನಿಶಾನೆ ನೀಡಿದರು. ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಉಪಪ್ರಚಾರ್ಯರದ ವಿನಾಯಕ ಪೈ, ಇಕೋ ಕ್ಲಬ್ ಸಂಯೋಜಕರಾದ ನಾಗರಾಜ ಗಿಳಿಯಾರು, ಉಪನ್ಯಾಸಕರಾದ ದಿನೇಶ್, ಸೂರಜ್ ಮರವಂತೆ ಮತ್ತು ಕಾಲೇಜಿನ ವಿದ್ಯಾರ್ಥಿ ವಿದ್ಯಾಥಿನಿಯರು ಜಾಥಾದಲ್ಲಿ ಭಾಗವಹಿಸಿದರು. ಉಡುಪಿ ನಗರ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!