Friday, October 2, 2026
Friday, October 2, 2026

ಕೋಟೇಶ್ವರ: ಉದ್ಯೋಗ ಮಾರ್ಗದರ್ಶನ ಕಾರ್ಯಗಾರ

ಕೋಟೇಶ್ವರ: ಉದ್ಯೋಗ ಮಾರ್ಗದರ್ಶನ ಕಾರ್ಯಗಾರ

Date:

ಕೋಟೇಶ್ವರ, ಮಾ.17: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನುಕ್ಷಣವು ವಿದ್ಯಾರ್ಥಿಯು ತನ್ನನ್ನು ತಾನು ಬದಲಾಗುತ್ತಿರುವ ವಾತಾವರಣಕ್ಕೆ ಅನುಗುಣವಾಗಿ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಬೇಕೆಂದು ಉಡುಪಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಕಾಂತ್ ಭಟ್ ವಿದ್ಯಾರ್ಥಿಗಳನ್ನುದ್ದೇಶಿಸಿ ಸಲಹೆ ನೀಡಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಭಾಗವಹಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ ಕಾರ್ಯಗಾರವನ್ನು ಸಂಯೋಜಿಸಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂತಿಮ ಬಿ.ಕಾಂ. ವಿದ್ಯಾರ್ಥಿ ಪ್ರತಿನಿಧಿಗಳಾದ ಓಂಕಾರ್ ಮತ್ತು ರಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ನವ್ಯಾ ಕಾರ್ಯಕ್ರಮ ನಿರೂಪಿಸಿದರು. ಕವನ ಮತ್ತು ತಂಡ ಪ್ರಾರ್ಥಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಾಂಧಿ ನೆನಪಲ್ಲಿ ಸಾಮರಸ್ಯ ನಡಿಗೆ

ಹಿರಿಯಡಕ, ಅ.2: ಈ ನೆಲದ ಆತ್ಮವಾಗಿ ಭಾರತವನ್ನು ಮುನ್ನಡೆಸಿ ಜಗತ್ತನ್ನು ಎಚ್ಚರಿಸುವ...

ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 125ನೇ ವರ್ಷಚಾರಣೆಗೆ ಚಾಲನೆ

ಉಡುಪಿ, ಅ.2: ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ತಾಂಗದಗಡಿ ಪ್ರಸಕ್ತ...

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...
error: Content is protected !!