Saturday, February 7, 2026
Saturday, February 7, 2026

ವಿಶ್ವ ಕಿಡ್ನಿ ದಿನಾಚರಣೆ; ಆರೋಗ್ಯ ತಪಾಸಣೆ

ವಿಶ್ವ ಕಿಡ್ನಿ ದಿನಾಚರಣೆ; ಆರೋಗ್ಯ ತಪಾಸಣೆ

Date:

ಉಡುಪಿ, ಮಾ.17: ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾಸ್ಪತ್ರೆ ಎನ್.ಸಿ.ಡಿ ವಿಭಾಗ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕಿಡ್ನಿ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಕಾರ್ಯಕ್ರಮ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಹೆಚ್ ಅಶೋಕ್ ಮಾತನಾಡಿ, ಪ್ರತಿಯೊಬ್ಬರೂ ಆರೋಗ್ಯ ತಪಾಸಣೆಯನ್ನು ನಿರಂತರವಾಗಿ ಮಾಡಿಸುವುದರ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದ ಅವರು, ಕಿಡ್ನಿಯ ಆರೈಕೆ ಹಾಗೂ ಜೀವನ ಶೈಲಿಯ ಬದಲಾವಣೆ ಕುರಿತು ಮಾಹಿತಿ ನೀಡಿದರು.

ಮೂತ್ರಪಿಂಡ ತಜ್ಞೆ ಡಾ. ಮೇಘ ಪೈ, ಕಿಡ್ನಿ ಖಾಯಿಲೆಯ ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಅದರ ಆರೈಕೆಯ ಬಗ್ಗೆ ಮಾಹಿತಿ ನೀಡಿದರು. ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಡಿ, ನಾನ್ ಕ್ಲಿನಿಕ್ ಸಿಬ್ಬಂದಿಗಳು, ಶುಶ್ರೂಷಾಧಿಕಾರಿ, ವೈದ್ಯಾಧಿಕಾರಿ ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳಿಗೆ ಉಚಿತ ಕಿಡ್ನಿಗೆ ಸಂಬಂಧಿಸಿದ ರಕ್ತ ಪರೀಕ್ಷೆ ತಪಾಸಣಾಗಳನ್ನು ನಡೆಸಲಾಯಿತು. ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ವೈದ್ಯಕೀಯ ತಜ್ಞೆ ಡಾ. ದಯಾಮಣಿ, ಎನ್.ಸಿ.ಡಿ ಘಟಕದ ಜಿಲ್ಲಾ ಸಮಾಲೋಚಕಿ ಡಾ.ಅಂಜಲಿ, ಜಿಲ್ಲಾ ಗುಣಮಟ್ಟ ಖಾತ್ರಿ ವಿಭಾಗದ ಮ್ಯಾನೇಜರ್ ಡಾ.ದಿವ್ಯ, ಆಪ್ತ ಸಮಾಲೋಚಕ ಮನು ಎಸ್.ಬಿ., ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!