Saturday, January 17, 2026
Saturday, January 17, 2026

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು: ಬೌದ್ಧಿಕ ಆಸ್ತಿ ಹಕ್ಕುಗಳ ಕಾರ್ಯಾಗಾರ

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾರಕೂರು: ಬೌದ್ಧಿಕ ಆಸ್ತಿ ಹಕ್ಕುಗಳ ಕಾರ್ಯಾಗಾರ

Date:

ಬಾರಕೂರು, ಮಾ.18: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು, ಐಕ್ಯೂಎಸಿ, ರಿಸರ್ಚ್ ಆಂಡ್ ಡೆವಲಪ್ಮೆಂಟ್ ಸೆಲ್ ಮತ್ತು ಯೂತ್ ರೆಡ್ ಕ್ರಾಸ್ ಜಂಟಿ ಆಶ್ರಯದಲ್ಲಿ ಬೋಧಕರಿಗೆ ಎಫ್.ಡಿ.ಪಿ. ಕಾರ್ಯಕ್ರಮ ಶನಿವಾರ ನಡೆಯಿತು. ನ್ಯಾಯವಾದಿ ಡಾ. ಸಂತೋಷ್ ಪ್ರಭು ಅವರು ಸಂಪನ್ಮೂಲ ವ್ಯಕ್ತಿಯಾಗಿ ಬೌದ್ಧಿಕ ಆಸ್ತಿ ಹಕ್ಕುಗಳು (ಇನ್ಟಲೆಕ್ಚುವಲ್ ಪ್ರಾಪರ್ಟಿ ರೈಟ್ಸ್) ಕುರಿತು ವಿಸ್ತ್ರತವಾದ ಮಾಹಿತಿ ನೀಡಿದರು. ಕಾಪಿರೈಟ್, ಟ್ರೇಡ್ ಮಾರ್ಕ್ಸ್, ಪೇಟೆಂಟ್ ಔಚಿತ್ಯಗಳ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ ಎಸ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಜಾಗತೀಕರಣವು ಅಂತರರಾಷ್ಟ್ರೀಯ ಒಪ್ಪಂದಗಳ ಮೂಲಕ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಬಲಪಡಿಸಿ, ನಾವೀನ್ಯತೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿದೆ. ಆದಾಗ್ಯೂ, ಇದು ಸವಾಲುಗಳಿಗೆ ಕಾರಣವಾಗಿದೆ. ಬೌದ್ಧಿಕ ಆಸ್ತಿ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ಸಂಪೂರ್ಣವಾಗಿ ತಿಳಿದುಕೊಳ್ಳುವ ಅವಶ್ಯಕತೆಯಿದೆ ಎಂದರು.

ರಿಸರ್ಚ್ ಆಂಡ್ ಡೆವಲಪ್ಮೆಂಟ್ ಸೆಲ್ ಸಂಯೋಜಕರು ಮತ್ತು ಹಿರಿಯ ಪ್ರಾಧ್ಯಾಪಕರಾದ ಪ್ರೊ. ಪ್ರಸಾದ್ ರಾವ್, ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರಾದ ಶೋಭಾ ಆರ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹರೀಶ್ ಸಿ.ಕೆ., ಯೂತ್ ರೆಡ್ ಕ್ರಾಸ್ ಸಂಯೋಜಕರಾದ ಸತೀಶ್ ಕುಮಾರ್ ಬಿ.ಡಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕಿ ಶೋಭಾ ಆರ್ ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥರಾದ ಅಮೃತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!