Saturday, February 7, 2026
Saturday, February 7, 2026

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ ನಗರಸಭೆ ವಿವಿಧ ಬೇಡಿಕೆಗಳ ಬಗ್ಗೆ ಪೌರಾಡಳಿತ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಮಾ.19: ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ರವರು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರನ್ನು ಭೇಟಿಯಾಗಿ ಉಡುಪಿ ನಗರಸಭೆಗೆ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ನಗರಸಭೆಗೆ ಪೂರ್ಣಕಾಲಿಕ ಖಾಯಂ ಪೌರಾಯುಕ್ತ ಹುದ್ದೆ ಖಾಲಿ ಇದ್ದು, ಕಳೆದ ಹಲವಾರು ತಿಂಗಳಿನಿಂದ ಪೂರ್ಣಕಾಲಿಕ ಪೌರಾಯುಕ್ತರಿಲ್ಲದೆ ನಗರಸಭೆಯ ಆಡಳಿತಾತ್ಮಕ ಕಾರ್ಯಗಳು ಹಾಗೂ ಸಾರ್ವಜನಿಕರ ದಿನನಿತ್ಯದ ಸೇವೆಗಳಿಗೆ ಸಮಸ್ಯೆಯಾಗುತ್ತಿರುವುದರಿಂದ ಪೂರ್ಣಕಾಲಿಕ ಪೌರಾಯುಕ್ತರನ್ನು ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಉಡುಪಿ ನಗರಸಭೆಯ ನೀರು ಸರಬರಾಜು ಅನುದಾನದಲ್ಲಿ ಲಭ್ಯವಿರುವ ನಿಧಿಯನ್ನು ಸಾಮಾನ್ಯ ನಿಧಿಯಾಗಿ ಸಿವಿಲ್ ಕಾಮಗಾರಿಗಳಿಗೆ ಬಳಸಲು ಸಲ್ಲಿಸಿದ ಪ್ರಸ್ತಾವನೆಗೆ ಶೀಘ್ರಅನುಮೋದನೆ, ನಗರಸಭೆಯ ನೂತನ ಕಛೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಹಾಗೂ ಉಡುಪಿ ನಗರದ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖೆಯ ಮೂಲಕ ವಿಶೇಷ ಅನುದಾನ ಒದಗಿಸಿ ಸಹಕಾರ ನೀಡುವಂತೆ ಶಾಸಕ ಯಶ್ಪಾಲ್ ಸುವರ್ಣ ಸಚಿವರಿಗೆ ಕೋರಿದರು. ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲೇ ನೇಮಕ ಹಾಗೂ ಅನುದಾನ ಬೇಡಿಕೆಯ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!