Sunday, October 4, 2026
Sunday, October 4, 2026

ತೆಂಕನಿಡಿಯೂರು: ಜಾನಪದ ಸಂಭ್ರಮ

ತೆಂಕನಿಡಿಯೂರು: ಜಾನಪದ ಸಂಭ್ರಮ

Date:

ಮಲ್ಪೆ, ಮಾ.24: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಸಾಂಸ್ಕೃತಿಕ ಸಮಿತಿ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಅದೇಶದಂತೆ “ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ” ಎಂಬ ಧ್ಯೇಯದೊಂದಿಗೆ ಜಾನಪದ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಈ ಪ್ರದೇಶದ ಸಂಸ್ಕೃತಿಯನ್ನು ಬಿಂಬಿಸುವ ಉಡುಗೆ ತೊಡುಗೆ ಹಾಗೂ ಸ್ಥಳೀಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ಘಾಟಕರಾಗಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ನಮ್ಮ ಜಿಲ್ಲೆ ಸಂಸ್ಕೃತಿಗೆ ಹಾಗೂ ಆಚರಣೆಗಳಿಗೆ ಪ್ರಸಿದ್ದವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಆಚಾರ ವಿಚಾರಗಳು ಎಲ್ಲರಿಗೂ ಮಾದರಿ. ಪ್ರಾದೇಶಿಕ ಸಾಂಸ್ಕೃತಿಕ ಪರಂಪರೆ ಹಾಗೂ ಆಚರಣೆಗಳಿಂದ ಜೀವನೋತ್ಸಾಹದ ಜೊತೆಗೆ ಉತ್ತಮ ಸಂಸ್ಕಾರವು ನಮ್ಮದಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವಕರ ಮಾತನಾಡಿ ಮಕ್ಕಳಿಗೆ ಸಂಸ್ಕೃತಿಯ ಪರಿಚಯ ಅವರ ಕುಟುಂಬ ವ್ಯವಸ್ಥೆಯ ಮೂಲಕ ಆಗುತ್ತದೆ. ಇಂತಹ ಜಾನಪದ ಸಾಂಸ್ಕೃತಿಕ ಅಭಿವ್ಯಕ್ತಿಗಳು ನಮ್ಮ ಪರಂಪರೆಯನ್ನು ಸದೃಢವಾಗಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು. ಕಾಲೇಜಿನ ಪ್ರಾಧ್ಯಾಪಕರಾದ ಹಮೀದಾ ಬಾನು ಬೇಗಂ, ಡಾ. ಶ್ರೀಧರ ಭಟ್, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಸುಷ್ಮಾ ಟಿ., ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಜಾನಪದ ಸಂಭ್ರಮದ ಸಂಘಟಕರು ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಡಾ. ಉದಯ ಶೆಟ್ಟಿ ಕೆ. ಸ್ವಾಗತಿಸಿ. ಶರಣ್ಯ ಕಾರ್ಯಕ್ರಮ ನಿರೂಪಿಸಿದರು. ನೈನಾ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ದೇಶೀ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದಲ್ಲಿ ಭಾಗವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!