Friday, September 20, 2024
Friday, September 20, 2024

ಮೇ 1- ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಚಿಣ್ಣರ ಹಬ್ಬ

ಮೇ 1- ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಚಿಣ್ಣರ ಹಬ್ಬ

Date:

ಕಾರ್ಕಳ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ನಂದಳಿಕೆ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಮೇ 1 ರಂದು ಆದಿತ್ಯವಾರ ಬೆಳಿಗ್ಗೆ 9-00 ರಿಂದ ಸಂಜೆ 5-30ರ ವರೆಗೆ “ಚಿಣ್ಣರ ಹಬ್ಬ – 2022” ಮಕ್ಕಳ ಕನಸು ಚಿಗುರುವ ಬೇಸಿಗೆ ಹಬ್ಬ ಕಾರ್ಯಕ್ರಮ ಜರಗಲಿದೆ.

ಸಮಾರಂಭದಲ್ಲಿ ಭಜನೆ, ಯೋಗ ಪ್ರದರ್ಶನ, ನೃತ್ಯ, ಹಾಡು, ರಸಪ್ರಶ್ನೆ ಸ್ಪರ್ಧೆ, ನೀತಿಕಥೆ, ಆಟೋಟ ಸ್ಪರ್ಧೆಗಳ ಸಂಭ್ರಮ ಜರಗಲಿದೆ. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ಬೆಳ್ಮಣ್ಣು ಜೇಸಿಐ ಅಧ್ಯಕ್ಷರಾದ ವೀಣೇಶ್ ಅಮೀನ್, ಜೇಸಿಐ ವಲಯ ತರಬೇತುದಾರರಾದ ಜಯಂತಿ ಆರ್. ಶೆಟ್ಟಿ, ಯುವ ಸಾಹಿತಿ ಸುಷ್ಮಾ ಪೂಜಾರಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

04 ರಿಂದ 16 ವರ್ಷ ವಯಸ್ಸಿನ ಆಸಕ್ತ ಮಕ್ಕಳೆಲ್ಲರೂ ಚಿಣ್ಣರ ಹಬ್ಬದಲ್ಲಿ ಉಚಿತ ಪ್ರವೇಶ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿರಿರುವವರು 8861266900, 9902171267, 9900815564 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದೆಂದು ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹಾಗೂ ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!