Tuesday, November 10, 2026
Tuesday, November 10, 2026

ರೈತರ ಮಕ್ಕಳಿಗೆ ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ, ಮಾ.26: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಕನಿಷ್ಠ 18 ವರ್ಷ ಮೇಲ್ಪಟ್ಟ ಮತ್ತು ಗರಿಷ್ಠ ವಯಸ್ಸು ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ 33 ವರ್ಷ, ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ವಯಸಿನ ಮಿತಿ 33 ರಿಂದ 65 ವರ್ಷ ದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://horticulturedir.karnataka.gov.inಅಥವಾ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 8 ರಂದು ಬೆಳಗ್ಗೆ ಉಡುಪಿಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದ್ದು, ಏ. 16 ರಂದು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...
error: Content is protected !!