ಕಾಪು, ಏ.9: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇದರ ವಾರ್ಷಿಕ ಕ್ರೀಡಾಕೂಟ ಮಂಗಳವಾರ ನಡೆಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವ್ಕರ್ ಇವರು ವಹಿಸಿದ್ದರು. ಎಂ.ಎಸ್.ಆರ್.ಎಸ್. ಕಾಲೇಜು ಶಿರ್ವ ಇಲ್ಲಿಯ ದೈಹಿಕ ಶಿಕ್ಷಣ ನಿರ್ದೇಶಕಿ ಸೌಮ್ಯ ಶೆಟ್ಟಿ ಇವರು ಕ್ರೀಡಾಕೂಟದ ಉದ್ಘಾಟನೆಯನ್ನು ನಡೆಸಿಕೊಟ್ಟರು, ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕಾದರೆ ಕ್ರೀಡೆ ಅತಿ ಮುಖ್ಯ. ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅತಿಥಿಯಾಗಿ ಮಹಾದೇವಿ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಜ್ಯೋತಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಕ್ಷೇಮಪಾಲನ ಸಂಚಾಲಕರಾದ ಡಾ. ನಯನ ಎಲ್ ಎಮ್., ಐಕ್ಯೂಎಸಿ ಸಂಚಾಲಕರಾದ ಡಾ. ರೋಶ್ನಿ ಯಶವಂತ್ ಹಾಗೂ ಎಲ್ಲಾ ಪ್ರಾಧ್ಯಾಪಕರು ಉಪಸ್ಥಿತರಿದ್ದರು , ಕ್ರೀಡಾ ಕಾರ್ಯದರ್ಶಿ ಕೌಶಿಕ್ ಇವರು ಪ್ರತಿಜ್ಞಾವಿಧಿ ಬೋಧಿಸಿದರು, ದೈಹಿಕ ಶಿಕ್ಷಣ ನಿರ್ದೇಶಕಿ ಸವಿತಾ ಸ್ವಾಗತಿಸಿದರು, ವೈಷ್ಣವಿ ವಂದಿಸಿದರು. ರಿಯನಾ ಕಾರ್ಯಕ್ರಮ ನಿರೂಪಿಸಿದರು.




By
ForthFocus™