Sunday, October 4, 2026
Sunday, October 4, 2026

ಭಾರತೀಯ ಸೇನೆ ಸೇರಬಯಸುವವರಿಗೆ ಆಯ್ಕೆ ಪೂರ್ವ ಸಿದ್ಧತಾ ತರಬೇತಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆ ಸೇರಬಯಸುವವರಿಗೆ ಆಯ್ಕೆ ಪೂರ್ವ ಸಿದ್ಧತಾ ತರಬೇತಿಗೆ ಅರ್ಜಿ ಆಹ್ವಾನ

Date:

ಉಡುಪಿ, ಏ.9: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2574881 ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!