Sunday, October 4, 2026
Sunday, October 4, 2026

ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

Date:

ಉಡುಪಿ, ಏ.9: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಧಾರ್ಮಿಕ ಪರಿಷತ್ತಿನ ಜಿಲ್ಲಾ ಧಾರ್ಮಿಕ ಪರಿಷತ್‌ನ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದ ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 17 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!