Sunday, October 4, 2026
Sunday, October 4, 2026

ಚಾಪೆ ನೆಜಿ ತರಬೇತಿ ಉದ್ಘಾಟನೆ

ಚಾಪೆ ನೆಜಿ ತರಬೇತಿ ಉದ್ಘಾಟನೆ

Date:

ಬ್ರಹ್ಮಾವರ, ಏ.9: ಜಿಲ್ಲಾ ಪಂಚಾಯತ್ ಉಡುಪಿ,ಕೃಷಿ ಹಾಗೂ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇವರ ವತಿಯಿಂದ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಗೆ ಭತ್ತದ ಚಾಪೆ ನೆಜಿ ತರಬೇತಿ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರದಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ಶ್ರೀನಿವಾಸ್ ರಾವ್ ಉದ್ಘಾಟಿಸಿ ಮಾತನಾಡುತ್ತಾ, ಗ್ರಾಮೀಣ ಪ್ರದೇಶದ ಸಂಜೀವಿನಿ ಸ್ವ ಸಹಾಯ ಗುಂಪಿನ ಮೂಲಕ ಕೃಷಿ ಚಟುವಟಿಕೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಪೂರಕವಾಗಿ ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಕೃಷಿ ಸಖಿಯರನ್ನು ಆಯ್ಕೆ ಮಾಡಿ ಇವರ ಮುಖಾಂತರ ಕೃಷಿಗೆ ಸಂಬಂಧಿಸಿದ ಯೋಜನೆಗಳನ್ನು ಗ್ರಾಮೀಣ ಪ್ರದೇಶ ದ ರೈತರಿಗೆ ತಲುಪಿಸುವ ಕೆಲಸವನ್ನು ಮಾಡಲಾಗುತ್ತಿದೆ.

ಪ್ರತಿ ಮುಂಗಾರಿನಲ್ಲಿ ರೈತರು ಭತ್ತದ ನೆಜಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಸಂಜೀವಿನಿ ಮಹಿಳೆಯರಿಗೆ ಕೃಷಿ ಸಂಬಂಧಿಸಿದ ಆದಾಯೋತ್ಪಾನ್ನ ಚಟುವಟಿಗಳನ್ನು ಕೈಗೊಳ್ಳುವ ಉದ್ದೇಶದಿಂದ ಇಂದು ಚಾಪೆ ನೆಜಿ ತರಬೇತಿಯನ್ನು ಆಯೋಜನೆ ಮಾಡಲಾಗಿದೆ. ಈ ತರಬೇತಿ ಪಡೆದ ಮಹಿಳೆಯರಿಗೆ ತಮ್ಮ ಗ್ರಾಮ ಮಟ್ಟದಲ್ಲಿ ಚಾಪೆ ನೆಜಿ ತಯಾರಿಸಿ ಅದಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಇದರಿಂದ ಈ ಮಹಿಳೆಯರು ಆದಾಯ ಗಳಿಸುವ ಯೋಜನೆಯನ್ನು ರೂಪಿಸಲಾಗಿದೆ. ತರಬೇತಿ ಪಡೆದ ಮಹಿಳೆಯರು ಸಂಜೀವಿನಿ ಆಶಯದಂತೆ ಆರ್ಥಿಕವಾಗಿ ಸಬಲೀಕರಣರಾಗಿ ಇತರ ಮಹಿಳೆಯರಿಗೂ ಉದ್ಯೋಗ ನೀಡುವಂತಾಗಬೇಕೆಂದು ತಿಳಿಸಿದರು.

ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕರಾದ ಡಾ.ಶಂಕರ್ ಮಹಿಳೆಯರಿಗೆ ಚಾಪೆ ನೆಜಿ ತಯಾರಿಸುವ ಬಗ್ಗೆ ಪ್ರಾತ್ಯಕ್ಷಿತವಾಗಿ ಸವಿಸ್ತಾರವಾದ ಮಾಹಿತಿ ನೀಡಿದರು. ಡಾ.ರೇವಣ್ಣ ಸಹ ಸಂಶೋಧನಾ ನಿರ್ದೇಶಕರು, ಸುಧೀರ್ ಕಾಮತ್ ಪ್ರಾಂಶುಪಾಲರು ಕೃಷಿ ಡಿಪ್ಲೋಮೋ ಮಹಾ ವಿದ್ಯಾಲಯ, ಡಾ. ನವೀನ್ ವಿಜ್ಞಾನಿಗಳು ಬೇಸಾಯಶಾಸ್ತ್ರ ಡಾ.ವಿನೋದ್ ವಿಜ್ಞಾನಿಗಳು ಕೃಷಿ ವಿಜ್ಞಾನ ಕೇಂದ್ರ, ಅವಿನಾಶ್ ಜಿಲ್ಲಾ ವ್ಯವಸ್ಥಾಪಕರು, ಬಬಿತ ವಲಯ ಮೇಲ್ವಿಚಾರಕರು ಹಾಜರಿದ್ದರು. ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ 35 ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸಿ ಚಾಪೆ ನೆಜಿ ತರಬೇತಿಯ ಪ್ರಯೋಜನ ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!