Thursday, July 30, 2026
Thursday, July 30, 2026

ಶತಮಾನ ಕಂಡ ಶಾಲೆ ಉಳಿಸುವ ಮಹತ್ಕಾರ್ಯ ಶ್ಲಾಘನೀಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಶತಮಾನ ಕಂಡ ಶಾಲೆ ಉಳಿಸುವ ಮಹತ್ಕಾರ್ಯ ಶ್ಲಾಘನೀಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಕೋಟ, ಏ.10: ಒಂದು ಸರಕಾರಿ ಅಥವಾ ಅನುದಾನಿತ ಶಾಲೆ ಶತಮಾನ ಕಾಣುವುದು ಸುಲಭದ ಮಾತಲ್ಲ. ಅದನ್ನು ಮುನ್ನಡೆಸುವ ಮಹತ್ಕಾರ್ಯ ನಿಜಕ್ಕೂ ಅಭಿನಂದನಾರ್ಹವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ಸಾಸ್ತಾನದ ಪಾಂಡೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಶತಾವರ್ತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಶಿಕ್ಷಕರಿಗೆ ಗುರುವಂದನೆ ಸಲ್ಲಿಸಲಾಯಿತು. ಶಾಲಾ ವಾಹನ ಚಾಲಕರಿಗೆ ಸೇವಾ ಸಾರಥಿ ಗೌರವಾರ್ಪಣೆ ನೀಡಲಾಯಿತು. ಯೋಗಗುರುಕುಲದ ಮುಖ್ಯಸ್ಥ ಡಾ.ವಿದ್ವಾನ್ ವಿಜಯ ಮಂಜರ್ ಸ್ವಸ್ತಿವಾಚನಗೈದರು. ಮುಖ್ಯ ಅಭ್ಯಾಗತರಾಗಿ ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಶಾಲಾ ಸಂಚಾಲಕ ಫಾದರ್ ಸುನಿಲ್ ಡಿಸಿಲ್ವಾ, ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ ಭಟ್, ಶಿಕ್ಷಣ ಇಲಾಖೆಯ ಸಂಯೋಜಕ ಪ್ರಕಾಶ್ ಬಿ.ಬಿ., ಪಾಂಡೇಶ್ವರ ಭಾರ್ಗವಿ ಟ್ರಸ್ಟ್ ಮುಖ್ಯಸ್ಥೆ ನಂದಿನಿ ರಾಜೇಶ್ ಆರ್ಯ, ಕ್ಯಾಥೋಲಿಕ್ ಸಭಾ ಸಂತ ಅಂತೋನಿ ಇಗರ್ಜಿ ಅಧ್ಯಕ್ಷೆ ಸರಿತಾ ಗೊನ್ಸಾಲ್ವಿಸ್, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಪೂಜಾರಿ, ಸುರಕ್ಷಾ ಸಮಿತಿ ಅಧ್ಯಕ್ಷ ರವೀಶ್ ಶ್ರೀಯಾನ್, ರಕ್ಷಕ ಶಿಕ್ಷಕರ ಸಂಘದ ಅಧ್ಯಕ್ಷ ರವಿ ಪೂಜಾರಿ, ಶಾಲಾ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೂರಾಲು ನಾರಾಯಣ ಮಡಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಸುಜಾತ ವೆಂಕಟೇಶ ಪೂಜಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಪೂಜಾರಿ ವರದಿ ವಾಚಿಸಿದರು. ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಸುರೇಶ್ ಪೂಜಾರಿ ಸ್ವಾಗತಿಸಿದರು. ಶಾಲಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅಲ್ವಿನ್ ಆಂದ್ರಾದೆ, ಶಾಲಾ ಹಿಂದಿನ ವಿದ್ಯಾರ್ಥಿ ಅಭಿಜಿತ್ ಪಾಂಡೇಶ್ವರ ಕಾರ್ಯಕ್ರಮ ನಿರೂಪಿಸಿದರು. ಸತತ ಎರಡು ದಿನಗಳ ಶತಮಾನೋತ್ಸವ ಸಂಭ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಲರವ ಹಾಗೂ ಅರೆಹೊಳೆ ಪ್ರತಿಷ್ಠಾನ ಮಂಗಳೂರು ಇವರಿಂದ ಬಿಡುವನೇ ಬ್ರಹ್ಮಲಿಂಗ ನೃತ್ಯ ರೂಪಕ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!