Friday, September 4, 2026
Friday, September 4, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಚಿವ ಕೆ. ವೆಂಕಟೇಶ್ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಚಿವ ಕೆ. ವೆಂಕಟೇಶ್ ಭೇಟಿ

Date:

ಕಾಪು, ಏ.10: ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರ್ಶನ ಪಡೆದು ಅನುಗ್ರಹ ಪ್ರಸಾದ ಸ್ವೀಕರಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಜೀರ್ಣೋದ್ಧಾರ ಕಾಮಗಾರಿಗಳು ನಡೆದು ಬಂದ ಹಾದಿಯನ್ನು ವಿವರಿಸಿದರು.

ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್., ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಕಾರ್ಯನಿರ್ವಹಣಾಧಿಕಾರಿ ರವಿಕರಣ್, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಉಪಾಧ್ಯಕ್ಷ ಮಾಧವ ಆರ್. ಪಾಲನ್, ನವದುರ್ಗಾ ಲೇಖನ ಯಜ್ಣ ಸಮಿತಿ ಕಾರ್ಯಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ವ್ಯವಸ್ಥಾಪನಾ ಸಮಿತಿಯ ಸದಸ್ಯ ರವೀಂದ್ರ ಮಲ್ಲಾರ್, ರಘುರಾಮ ಶೆಟ್ಟಿ, ಸಾವಿತ್ರಿ ಗಣೇಶ್, ಪಶುಸಂಗೋಪನಾ ಇಲಾಖೆಯ ನಿರ್ದೇಶಕ ಡಾ. ಮಂಜುನಾಥ್ ಪಾಳೇಗಾರ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ರೆಡ್ಡಪ್ಪ, ಭಾರತೀಯ ವೈದ್ಯಕೀಯ ಪರಿಷತ್‌ನ ಸದಸ್ಯ ಡಾ. ಸುಶಾಂತ್ ರೈ, ಡಾ. ಅರುಣ್ ಹೆಗ್ಡೆ ಶಿರ್ವ, ಡಾ. ಸಂದೀಪ್ ಶೆಟ್ಟಿ ಉದ್ಯಾವರ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!