Thursday, July 23, 2026
Thursday, July 23, 2026

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Date:

ಕಾರ್ಕಳ/ಉಡುಪಿ, ಏ.10: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ರಾಜ್ಯಮಟ್ಟದಲ್ಲಿ 10 ರೊಳಗಿನ ರ‍್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ, 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 5ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ತಾನಿಗಳಾದ ಕಾರ್ಕಳ ಜ್ಞಾನಸುಧಾಧದ ಶ್ರೀರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಅಪೂರ್ವ್ ವಿ ಕುಮಾರ್ ಮತ್ತು ವಾಣಿಜ್ಯ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಕು.ಸಹನಾ ನಾಯಕ್ ಮತ್ತು ತನ್ವಿ ರಾವ್ ಇವರೊಂದಿಗೆ ಇತರ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾದ ಸಿ.ಇ.ಒ ದಿನೇಶ್ ಎಂ ಕೊಡವೂರ್, ಉಡುಪಿ ಜ್ಞಾನಸುಧಾದ ಪ್ರಾಂಶುಪಾಲರಾದ ಸಂತೋಷ್ ಹಾಗೂ ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಸಾಧಕ ವಿದ್ಯಾರ್ಥಿಗಳ ಹೆತ್ತವರು ಹಾಗೂ ಹಿತೈಷಿಗಳಾದ ತ್ರಿವಿಕ್ರಮ ಕಿಣಿ ಹಾಗೂ ದೇವೇಂದ್ರ ನಾಯಕ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಆಂಗ್ಲಭಾಷಾ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!