Friday, July 24, 2026
Friday, July 24, 2026

ಹಿಂದುಸ್ಥಾನಿ ಸಂಗೀತ ರಸ ಗ್ರಹಣ ಶಿಬಿರ

ಹಿಂದುಸ್ಥಾನಿ ಸಂಗೀತ ರಸ ಗ್ರಹಣ ಶಿಬಿರ

Date:

ಮಣಿಪಾಲ, ಏ.10: ಹಲವು ಘರಾನಗಳು, ಪ್ರಕಾರ, ಪ್ರಯೋಗಗಳನ್ನೊಳಗೊಂಡ ಹಿಂದೂಸ್ತಾನಿ ಸಂಗೀತವು, ಈ ಕಾರಣಗಳಿಂದಲೇ ಶ್ರೀಮಂತವೂ ಹಾಗೂ ವೈವಿಧ್ಯಪೂರ್ಣವೂ ಆಗಿದೆ ಎಂದು ವಿದುಷಿ ಶ್ರೀಮತಿದೇವಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆಂಡ್ ಸೈನ್ಸಸ್ (ಜಿಸಿಪಿಎಎಸ್) ನ ಆಶ್ರಯದಲ್ಲಿ ತಮ್ಮ ಎರಡು ದಿನಗಳ ಹಿಂದುಸ್ಥಾನಿ ಸಂಗೀತ ರಸ ಗ್ರಹಣ ಶಿಬಿರದಲ್ಲಿ ಮಾತನಾಡುತ್ತಾ ವಿದುಷಿ ಶ್ರೀಮತಿದೇವಿಯವರು, ಗ್ವಾಲಿಯರ್, ಜೈಪುರ, ಆಗ್ರಾ, ಕಿರಾಣಾ ಮುಂತಾದ ಘರಾನಗಳು, ಖಮಾಲ್, ಠುಮ್ರಿ, ಠಪ್ಜಾ ಇತ್ಯಾದಿ ಪ್ರಕಾರಗಳು, ಅಲ್ಲಾದಿಯಾ ಖಾನ್, ಭೀಮಸೇನ್ ಜೋಶಿ, ಮಲ್ಲಿಕಾರ್ಜುನ ಮನ್ಸೂರ್, ಕುಮಾರ ಗಂಧರ್ವ, ಕಿಶೋರಿ ಅಮೋನ್ಕರ್, ಪರ್ವಿನ್ ಸುಲ್ತಾನಾ ಅಂಥವರ ಪ್ರಯೋಗಗಳೆಲ್ಲ ಸೇರಿ, – ಶ್ರೀಮಂತ ಮತ್ತು ವೈವಿಧ್ಯಪೂರ್ಣವಾಗಿದೆ ಎಂದು ಹೇಳಿದರು. ತಮ್ಮ ಎರಡು ದಿನಗಳ ಶಿಬಿರದಲ್ಲಿ ಹಿಂದೂಸ್ತಾನಿ ಸಂಗೀತದ ಸ್ವರ, ಲಯ, ರಾಗ- ಇತ್ಯಾದಿ ಸೂಕ್ಷ್ಮಗಳನ್ನು ವಿವರಿಸಿದ ಅವರು, ತಮ್ಮ ಪ್ರಾತ್ಯಕ್ಷಿಕೆಯ ಮೂಲಕ ಘರಾನಾ-ಪ್ರಕಾರ-ಪ್ರಯೋಗಗಳ ವ್ಯತ್ಯಾಸಗಳನ್ನು ಪ್ರಸ್ತುತ ಪಡಿಸಿದರು. ಹಿಂದೂಸ್ತಾನಿ ಸಂಗೀತದ ಬೆಳವಣಿಗೆಯ ಹಿಂದೆ ಹಲವು ಪ್ರತಿಭೆಗಳು ಕೆಲಸ ಮಾಡಿದ್ದನ್ನು ವಿವರಿಸಿದ ಅವರು, ಹಿಂದೂಸ್ತಾನಿ ಸಂಗೀತವು ಮತಧರ್ಮಗಳ ಚೌಕಟ್ಟನ್ನು ಮೀರಿ ಬೆಳೆದಿದೆ ಎಂದು ನುಡಿದರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ. ವರದೇಶ್ ಹಿರೇಗಂಗೆ, ಹಿಂದೂಸ್ತಾನಿ ಸಂಗೀತ ಭಾರತೀಯ ಸಂಸ್ಕೃತಿಯ ಅತ್ಯುತ್ತಮ ಪ್ರತಿನಿಧಿಯಾಗಿದೆ ಎಂದರು. ಡಾ. ರಾಜಾರಾಮ್ ತೊಲ್ಪಾಡಿ, ಡಾ. ಶ್ರೀಕುಮಾರ್, ಪ್ರೊ.ನೇಮಿರಾಜ್ ಶೆಟ್ಟಿ, ಡಾ. ಭ್ರಮರಿ ಶಿವಪ್ರಕಾಶ್, ಡಾ. ನಿರಂಜನ, ಡಾ. ಪ್ರಭಾಕರ ಮಲ್ಯ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!