Tuesday, October 20, 2026
Tuesday, October 20, 2026

‘ಬಾಲ ಲೀಲಾ’ ಚಿಣ್ಣರ ಬೇಸಿಗೆ ಶಿಬಿರಕ್ಕೆ ಚಾಲನೆ

‘ಬಾಲ ಲೀಲಾ’ ಚಿಣ್ಣರ ಬೇಸಿಗೆ ಶಿಬಿರಕ್ಕೆ ಚಾಲನೆ

Date:

ಉಪ್ಪೂರು, ಏ.11: ಭಾವನಾ ಫೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸುತ್ತಿರುವ ಬಾಲ ಲೀಲಾ ಚಿಣ್ಣರ ಬೇಸಿಗೆ ಶಿಬಿರವು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಂಗೀತ ಸಂಯೋಜಕರಾದ ಅರುಣ್ ಹಾವಂಜೆ ಇವರಿಂದ ಉದ್ಘಾಟನೆಗೊಂಡಿತು. ನಮ್ಮೂರಿನಲ್ಲಿ ಭಾವನಾ ಫೌಂಡೇಶನ್ ಸಂಘಟಿಸುತ್ತಿರುವ ಬೇಸಿಗೆ ಶಿಬಿರವು ಬಹು ಮಹತ್ವಪೂರ್ಣವಾದುದು ಮತ್ತು ಇಂದಿನ ಆಧುನಿಕ ಜೀವನದ ನಡುವೆ ಸಾಂಪ್ರದಾಯಿಕ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಕಲೆ, ಅಭಿನಯ, ಸಂಗೀತ ಎಲ್ಲವನ್ನೂ ಸಮೀಕರಿಸುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಅಭಿಪ್ರಾಯವಿತ್ತರು.

ಭಾವನಾ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷರಾದ ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಹಾಗೂ ಶಿಬಿರ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ, ವಿಶುರಾವ್ ಹಾವಂಜೆ ಹಾಗೂ ವಿದುಷಿ ಅಕ್ಷತಾ ವಿಶು ರಾವ್ ಉಪಸ್ಥಿತರಿದ್ದರು. ಈ ಬೇಸಿಗೆ ಶಿಬಿರವು ನಾಲ್ಕು ದಿನಗಳ ಕಾಲ ನಡೆಯಲಿದ್ದು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ಹಾಗೂ ಕಸವನ್ನು ರಸವಾಗಿಸುವ ಉದ್ದೇಶದೊಂದಿಗೆ ರೂಪಿಸಲಾಗಿದೆ. ಅಭಿನಯ, ಆವೆಮಣ್ಣಿನ ಶಿಲ್ಪಗಳು, ಕಾವಿ ಕಲೆ, ಪಕ್ಷಿ ವೀಕ್ಷಣೆ, ಮನೆಮದ್ದು, ಗ್ರಾಮೀಣ ಆಟಗಳು, ಸಂಗೀತ, ಬಟ್ಟೆಯ ಮೇಲೆ ಮುದ್ರಣ ಕಲೆ ಮುಂತಾಗಿ ಹತ್ತು ಹಲವಾರು ಅಂಶಗಳನ್ನು ಶಿಬಿರದಲ್ಲಿ ಕಲಿಸಿ ಕೊಡಲಾಗುತ್ತಿದೆ.

ಶಿಬಿರದ ಸಮಾರೋಪ ಸಮಾರಂಭವು ಏಪ್ರಿಲ್ ೧೩ನೇ ಭಾನುವಾರದಂದು ಸಂಜೆ 2:30ಕ್ಕೆ ನೆರವೇರಲಿದ್ದು, ಇದೇ ಸಂದರ್ಭದಲ್ಲಿ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ “ವಿಶ್ವ ಕಲಾ ಸಿಂಧು” ಪುರಸ್ಕಾರವನ್ನು ಹಿರಿಯ ಕಲಾವಿದರಾದ ರಮೇಶ್ ರಾವ್ ಇವರಿಗೆ ನೀಡಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಥಾನದ ವಿಶ್ವನಾಥ ಶೆಣೈ, ಕುಂದಾಪುರದ ಯುವ ಉದ್ಯಮಿಗಳಾದ ಸಂಪತ್ ಶೆಟ್ಟಿಯವರು ಉಪಸ್ಥಿತರಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!